ಮೈಸೂರು: ಜೆಡಿಎಸ್, ಬಿಜೆಪಿ (JDS, BJP) ಕಾರ್ಯಕರ್ತರು ಒಂದು ನಾಣ್ಯದ ಎರಡು ಮುಖಗಳ ರೀತಿ ಕೆಲಸ ಮಾಡಿದ್ದಾರೆ. 28 ಕ್ಷೇತ್ರದಲ್ಲೂ ಆ ಸಮನ್ವಯತೆ ಇತ್ತು ಎಂದು ತುಮಕೂರಿನ (Tumakuru) ಸಂಸದ ವಿ ಸೋಮಣ್ಣ (V Somanna) ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತುಮಕೂರು ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಜೆಡಿಎಸ್‌ನವರು ಹೆಚ್ಚಿನದಾಗಿ ಕೆಲಸ ಮಾಡಿದ್ದಾರೆ. ದೇವೇಗೌಡರು (Devegowda), ಕುಮಾರಸ್ವಾಮಿ (Kumaraswamy) ನಾಲ್ಕೈದು ಬಾರಿ ಬಂದು ನನಗೆ ದೊಡ್ಡ ಶಕ್ತಿ ನೀಡಿದರು. ಅವರಿಗೆ ನಾನು ಯಾವತ್ತು ಖುಣಿಯಾಗಿದ್ದೇನೆ ಎಂದರು. ಇದನ್ನೂ ಓದಿ: ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್
ಜೆಡಿಎಸ್ ಮತ್ತು ಬಿಜೆಪಿಯ ಈ ಸಮನ್ವಯತೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲೂ ಇದೇ ರೀತಿ ಮುಂದುವರೆಯುತ್ತದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಹನ್ನೊಂದು ತಿಂಗಳು ಒಂದು ರೀತಿ ವನವಾಸದಲ್ಲಿದೆ. ಸದಾ ಕೆಲಸ ಮಾಡುವವನಿಗೆ ಕೆಲಸವೇ ಇಲ್ಲದಂತಾಗಿತ್ತು. ಈಗ ಅದು ಮುಕ್ತಯವಾಗಿದೆ ಎಂದು ತಿಳಿಸಿದರು.
ತುಮಕೂರಿನ ಜನ ನಾನು ಹೊರಗಿನವನು ಎಂದು ಒಂದು ಕ್ಷಣವೂ ಅಂದುಕೊಳ್ಳಲಿಲ್ಲ. ಯಾರೋ ನಾಲ್ಕು ಜನ ನಾಯಕರು ಮಾತನಾಡಿದರು ತಲೆ ಕಡೆಸಿಕೊಳ್ಳಲಿಲ್ಲ. ಎರಡು ಲಕ್ಷದ ಲೀಡ್ ನೀರಿಕ್ಷೆ ಮಾಡಿದ್ದೆ. ಆದರೆ 20 ಸಾವಿರ ಕಡಿಮೆಯಾಗಿದೆ ಎಂದರು. ಇದನ್ನೂ ಓದಿ: ಎಂದಿನಂತೆ ಪ್ರಯತ್ನ ಮುಂದುವರೆಯಲಿದೆ- ಪತ್ನಿ ಸೋಲಿನ ಬಳಿಕ ಶಿವಣ್ಣ ರಿಯಾಕ್ಷನ್