ನವದೆಹಲಿ: ಜನಾಂಗೀಯ ನಿಂದನೆ ಹೇಳಿಕೆ ನೀಡಿ ಕಾಂಗ್ರೆಸ್ (Congress) ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದ ಸ್ಯಾಮ್ ಪಿತ್ರೋಡಾ (Sam Pitroda) ತಲೆದಂಡವಾಗಿದೆ.
ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ (Chairman of the Indian Overseas Congress) ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸ್ಯಾಮ್ ಪಿತ್ರೋಡಾ ರಾಜೀನಾಮೆ ಮಾಹಿತಿ ನೀಡಿದ್ದನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ (Jairam Ramesh) ಎಕ್ಸ್‌ನಲ್ಲಿ ತಿಳಿಸಿದ್ದಾರೆ
Advertisement
ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲೇ ಪಿತ್ರಾರ್ಜಿತ ಆಸ್ತಿ ಮರು ಹಂಚಿಕೆ (Wealth Redistribution) ಮತ್ತು ಈಗ ಭಾರತೀಯರ ಬಣ್ಣದ ಬಗ್ಗೆ ಜನಾಂಗೀಯ ನಿಂದನೆ (Racist Remark) ಬಗ್ಗೆ ಮಾತನಾಡಿ ವಿವಾದ ಹುಟ್ಟು ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಪಿತ್ರೋಡಾ ಮುಜುಗರ ತಂದಿದ್ದರು. ಇದನ್ನೂ ಓದಿ: ನಾನು ಡಾರ್ಕ್ ಸ್ಕಿನ್ ಭಾರತೀಯ- ಸ್ಯಾಮ್ ಪಿತ್ರೋಡಾಗೆ ಅಣ್ಣಾಮಲೈ ತಿರುಗೇಟು
Advertisement
श्री सैम पित्रोदा ने अपनी मर्ज़ी से इंडियन ओवरसीज कांग्रेस के अध्यक्ष पद से इस्तीफ़ा देने का फ़ैसला किया है। कांग्रेस अध्यक्ष ने उनका इस्तीफ़ा स्वीकार कर लिया है।
Mr. Sam Pitroda has decided to step down as Chairman of the Indian Overseas Congress of his own accord. The Congress…
— Jairam Ramesh (@Jairam_Ramesh) May 8, 2024
Advertisement
ಪಿತ್ರೋಡಾ ಹೇಳಿದ್ದೇನು?
ಭಾರತದ ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಂತೆ ಕಾಣಿಸುತ್ತಾರೆ. ಉತ್ತರ ಭಾರತದವರು ಬಹುಶಃ ಬಿಳಿಯರಂತೆ ಕಂಡರೆ, ದಕ್ಷಿಣ ಭಾರತದ ಜನ ಆಫ್ರಿಕನ್ನರಂತೆ ಕಾಣಿಸುತ್ತಾರೆ. ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಮಾತ್ರ ಎಲ್ಲರನ್ನೂ ಒಟ್ಟಿಗೆ ನೋಡಲು ಸಾಧ್ಯ. ನಾವೆಲ್ಲರೂ ಸಹೋದರ -ಸೋದರಿಯರಂತೆ ಜೀವಿಸುತ್ತಿದ್ದೇವೆ. ಇದನ್ನೂ ಓದಿ: ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ
Advertisement
Congress’s comparison of South Indians to Africans based on our dark skin color is highly racist.
We take strong objection to this racist comment. It shows the deep seated colonial mentality of the Nehru Gandhi family.
Does CM @siddaramaiah, who speaks of Kannada pride,…
— Tejasvi Surya (ಮೋದಿಯ ಪರಿವಾರ) (@Tejasvi_Surya) May 8, 2024
ಜಾಪ್ರಭುತ್ವ, ಸ್ವಾತಂತ್ರ್ಯ, ಭ್ರಾತೃತ್ವ ಮತ್ತು ಸ್ವಾತಂತ್ರ್ಯದಲ್ಲಿ ಬೇರೂರಿರುವ ಭಾರತದ ಮೂಲಭೂತ ತತ್ವಗಳು ಪ್ರಸ್ತುತ ಸವಾಲಿನಲ್ಲಿದೆ. ಈಗ ಭಾರತ ರಾಮ ನವಮಿ, ರಾಮ ಮಂದಿರದಿಂದ ಸವಾಲನ್ನು ಎದುರಿಸುತ್ತಿದೆ. ಸದಾಕಾಲ ದೇವಸ್ಥಾನಗಳಿಗೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಒಬ್ಬ ಭಾರತೀಯ ನಾಯಕನಂತೆ ಮಾತನಾಡದೇ ಭಾರತೀಯ ಜನತಾ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಹೆಸರಿನಲ್ಲಿ ಒಂದು ಧರ್ಮಕ್ಕೆ ಮಿತಿಮೀರಿದ ಪ್ರಾಧಾನ್ಯತೆ ನೀಡಲಾಗುತ್ತಿದೆ: ಸ್ಯಾಮ್ ಪಿತ್ರೋಡಾ ಕಿಡಿ
#WATCH | On Chairman of Indian Overseas Congress Sam Pitroda's controversial, PM Modi says,"…A close aide of Congress and biggest adviser of 'Prince' (Rahul Gandhi), what he said is very shameful. Congress feels that people of Northeast look like Chinese, can country accept… pic.twitter.com/HIIZqSXUk1
— ANI (@ANI) May 8, 2024
ಅಮೆರಿಕದಲ್ಲಿ ವ್ಯಕ್ತಿಯೊಬ್ಬ 100 ಮಿಲಿಯನ್ ಡಾಲರ್ ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಆತನ 45 ಪ್ರತಿಶತ ಸಂಪತ್ತು ಮಕ್ಕಳಿಗೆ ವರ್ಗಾವಣೆಯಾಗುತ್ತದೆ. 55% ಸಂಪತ್ತು ಸರ್ಕಾರಕ್ಕೆ ಹೋಗುತ್ತದೆ. ಇದೊಂದು ಆಸಕ್ತಿದಾಯಕ ಕಾನೂನು. ಈ ರೀತಿಯ ಯಾವುದೇ ಕಾನೂನು ಭಾರತದಲ್ಲಿ ಇಲ್ಲ. ಯಾರಾದರೂ 10 ಶತಕೋಟಿ ಮೌಲ್ಯದವರು ಮೃತಪಟ್ಟರೆ ಅವರ ಮಕ್ಕಳು 10 ಶತಕೋಟಿ ಪಡೆಯುತ್ತಾರೆ ಮತ್ತು ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ. ಈ ರೀತಿಯ ವಿಷಯಗಳ ಬಗ್ಗೆ ಜನರು ಚರ್ಚಿಸಬೇಕು. ಕಾಂಗ್ರೆಸ್ ಪಕ್ಷವು ಸಂಪತ್ತಿನ ಹಂಚಿಕೆಯನ್ನು ಉತ್ತಮಗೊಳಿಸುವ ನೀತಿಯನ್ನು ರೂಪಿಸುತ್ತದೆ ಎಂದಿದ್ದರು.