ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅದೇ ಅಂತರ ಅಥವಾ ಅದಕ್ಕಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಭವಿಷ್ಯ ನುಡಿದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ್ದ ಅವರು ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ಬಾರಿ ಶೋಭಾ ಕರಂದ್ಲಾಜೆ ಗೆದ್ದೇ ಗೆಲ್ಲುತ್ತಾರೆ. ಅದರ ಬಗ್ಗೆ ಯಾವುದೇ ಅನುಮಾನ ಬೇಡ. ಮೋದಿಯಿಂದಾಗಿ (Narendra Modi) ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿಯ (BJP) ಪರ ವಾತಾವರಣವಿದೆ. ನಾವು ರಾಜ್ಯದಲ್ಲಿ 28ಕ್ಕೆ 28 ಸ್ಥಾನ ಗೆಲ್ಲಬೇಕೆಂದು ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ದೇವಾಲಯದ ಹಣ ಸರ್ಕಾರದ ಒಳ್ಳೆಯ ಕೆಲಸಕ್ಕೆ ಉಪಯೋಗವಾಗುತ್ತಿದೆ: ಬಿಜೆಪಿ ವಿರುದ್ಧ ಅರ್ಚಕರ ಸಂಘ ಕಿಡಿ
Advertisement
Advertisement
ರಾಜ್ಯದಲ್ಲೂ ಕೂಡ ಅದೇ ವಾತಾವರಣವಿದೆ. ಶೋಭಾ ಕರಂದ್ಲಾಜೆ ವಿರುದ್ಧದ ಪಿತೂರಿ ಅದೊಂದು ಷಡ್ಯಂತ್ರ. ಅದನ್ನು ಯಾರು ಮಾಡಿಸುತ್ತಿದ್ದಾರೆ ಎಂಬುದು ಗೊತ್ತಿದೆ. ಆದರೆ ಅವರು ಯಾವುದಕ್ಕೂ ಧೃತಿಗೆಡಲ್ಲ. ಕೇಂದ್ರ ಸಚಿವೆಯಾಗಿ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಎಂದ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲು
Advertisement
ಮಂಡ್ಯ (Mandya) ಟಿಕೆಟ್ ಗೊಂದಲದ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ ಮಂಡ್ಯ ಟಿಕೆಟ್ ಕುರಿತು ಯಾವುದೇ ಚರ್ಚೆಯಾಗಿಲ್ಲ. ಮುಂದಿನ ಎರಡು ಮೂರು ದಿನಗಳಲ್ಲಿ ಗೊತ್ತಾಗಲಿದೆ. ಬಿಜೆಪಿಯ ಮೊದಲ ಪಟ್ಟಿ ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಬಹುದು ಎಂದು ಭಾವಿಸಿದ್ದೇನೆ ಎಂದರು.
Advertisement
ಕಳೆದ ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 3,49,599 ಮತಗಳ ಅಂತರದಿಂದ ಜಯಗಳಿಸಿದ್ದರು. ಕರಂದ್ಲಾಜೆ 7,18,916 ಮತಗಳನ್ನು ಪಡೆದರೆ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದಿದ್ದರು.