ಬೆಂಗಳೂರು: ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ (D. V. Sadananda Gowda) ಮೈಸೂರಿನಿಂದ (Mysuru) ಸ್ಪರ್ಧಿಸುತ್ತಾರಾ ಹೀಗೊಂದು ಪ್ರಶ್ನೆ ಎದ್ದಿದೆ.
ಇಂದು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಡಿವಿಎಸ್ ಮಾತನಾಡಿದರು. ಈ ವೇಳೆ ನಾನು ಮಹತ್ವದ ವಿಷಯದ ಬಗ್ಗೆ ನಾಳೆ ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದರಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ.
Advertisement
Advertisement
ಕಾಂಗ್ರೆಸ್ (Congress) ನಾಯಕರ ಸಂಪರ್ಕ ವಿಚಾರ ಒಪ್ಪಿಕೊಂಡ ಡಿವಿಎಸ್, ನನ್ನನ್ನ ಬೇರೆಬೇರೆಯವರು ಬಂದು ಸಂಪರ್ಕ ಮಾಡುತ್ತಿರುವುದು ನಿಜ. ನಿನ್ನೆ ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು ಸಮಾಧಾನ ಹೇಳಿದ್ದಾರೆ. ಇವತ್ತು ನನ್ನ ಜನ್ಮದಿನ. ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆದು ನಂತರ ನಿಶ್ಚಯ ಮಾಡುತ್ತೇನೆ ಎಂದು ಹೇಳಿದರು.
Advertisement
ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ಬೆಂಗಳೂರು ಉತ್ತರದಲ್ಲಿ ನಿಮಗೆ ಟಿಕೆಟ್ ಎಂದು ಹೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ಮಂಗಳವಾರ ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯುವುದಿಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಹೀಗಿದ್ದರೂ ತಿಳಿದೂ ತಿಳಿದೂ ಹೀಗೆ ಮಾಡಿರುವುದು ಬೇಜಾರು ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಲ್ಲೆಸೆತಕ್ಕೆ ಸುದ್ದಿಯಾಗಿದ್ದ ಕಾಶ್ಮೀರದಲ್ಲಿ ಫಸ್ಟ್ ಟೈಂ ಫಾರ್ಮುಲಾ 4 ರೇಸ್ – ಮೋದಿ ಮೆಚ್ಚುಗೆ
Advertisement
ಮೈಸೂರಿನಿಂದ ಸ್ಪರ್ಧೆ:
ಒಕ್ಕಲಿಗರ ಮತದಾರರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಆಪರೇಷನ್ ಹಸ್ತ ಮಾಡಿದ್ದು ಡಿವಿಎಸ್ ಅವರನ್ನು ಇಳಿಸಲು ಮುಂದಾಗಿದೆ ಎಂಬ ವದಂತಿ ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಈ ಬಗ್ಗೆ ಇನ್ನೂ ಯಾರು ಅಧಿಕೃತವಾಗಿ ತಿಳಿಸಿಲ್ಲ. ಹೀಗಾಗಿ ಮಂಗಳವಾರದ ಡಿವಿಎಸ್ ಸುದ್ದಿಗೋಷ್ಠಿ ಭಾರೀ ಮಹತ್ವ ಪಡೆದಿದೆ.