ಬಳ್ಳಾರಿ: ಸಿಎಂ ಕುಮಾರಸ್ವಾಮಿ ಮೇಲೆ ಚುನಾವಣಾ ಆಯೋಗ ನಿಗಾ ಇಡಬೇಕು. ಈ ನಿಟ್ಟಿನಲ್ಲಿ ವಿಶೇಷ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕೆಂದು ಎಂದು ಬಿಜೆಪಿ ಶಾಸಕ ಶ್ರೀರಾಮುಲು ಆಗ್ರಹಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಶಾಸಕರು, ಸಿಎಂ ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ. ಮುಖ್ಯಮಂತ್ರಿಯಾದ ಮೇಲೂ ತಮ್ಮ ಹಳೇ ಚಾಳಿ ಮುಂದುವರಿಸಿದ್ದಾರೆ. ಅಲ್ಲದೆ ಸಿಎಂ ಸಂಬಂಧಿ ಪರಮೇಶ್ ಅವರ ಕಚೇರಿ ಮೇಲೆ ಐಟಿ ದಾಳಿ ಮಾಡಿದಾಗ ಅಪಾರ ಪ್ರಮಾಣದ ಹಣ ದೊರೆತಿದೆ. ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಿಎಂ, ಪುತ್ರ ನಿಖಿಲ್ ಅವರನ್ನು ಗೆಲ್ಲಿಸಲು ಹಣ ಸಂಗ್ರಹಿಸಿದ್ದರು ಎನ್ನುವ ಆರೋಪ ಕೇಳಿ ಬರುತ್ತಿದೆ. ಹೀಗಾಗಿ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಂದರು.
Advertisement
Advertisement
ಭಾರತೀಯ ವಾಯುಪಡೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಈ ದಾಳಿಯ ಬಗ್ಗೆ ನನಗೆ ನಿವೃತ್ತ ಅಧಿಕಾರಿಯೊಬ್ಬರು ಮೊದಲೇ ಹೇಳಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷವಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಸಿಎಂಗೆ ಪಾಕಿಸ್ತಾನದ ಮೇಲೆ ಪ್ರೀತಿ ಜಾಸ್ತಿಯಾಗಿದೆ ಎಂದು ಕಿಡಿಕಾರಿದರು.
Advertisement
ಗಾಳಿ, ನೀರು, ಸವಲತ್ತು ಭಾರತದ್ದು, ಪಾಕಿಸ್ತಾನವನ್ನು ಹೊಗಳುತ್ತಾರೆ. ತಾಕ್ಕತ್ತಿದ್ದರೆ ನಿಮಗೆ ಮಾಹಿತಿ ನೀಡಿದ ಅಧಿಕಾರಿ ಹೆಸರು ಹೇಳಿ. ಎರಡು ವರ್ಷದಿಂದ ಯಾಕೆ ಬಾಯಿ ಮುಚ್ಚಿಕೊಂಡು ಇದ್ರಿ. ಚುನಾವಣೆಯಲ್ಲಿ ಯಾಕೆ ಇದನ್ನು ಹೇಳಬೇಕಿತ್ತು ಎಂದು ಶಾಸಕರು, ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಶ್ನಿಸಿದರು. ಇಂತಹ ಹೇಳಿಕೆ ನೀಡಿದ ಸಿಎಂ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಕಿಡಿಕಾರಿದರು.
Advertisement
https://www.youtube.com/watch?v=CiU5aKpzUgc