ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ವಿವಿಧ ಹಂತಗಳಲ್ಲಿ ಆಗುತ್ತಿರುವ ಮತದಾನ (Vote) ಪ್ರಮಾಣವನ್ನು ಚುನಾವಣಾ ಆಯೋಗ (Election Commission) ಸಕಾಲಕ್ಕೆ ನೀಡದಿರುವುದಕ್ಕೆ ಸಾಕಷ್ಟು ಆಕ್ಷೇಪಗಳು ವ್ಯಕ್ತವಾಗುತ್ತಿದೆ. ಆರಂಭಿಕ ಮತ್ತು ಅಂತಿಮ ಹಂತದಲ್ಲಿ ನೀಡಲಾದ ದತ್ತಾಂಶಗಳ ವ್ಯತ್ಯಾಸ 1.7 ಕೋಟಿ ಎಂದು ಕಾಂಗ್ರೆಸ್ (Congress) ಆರೋಪಿಸಿ ಕಳವಳ ವ್ಯಕ್ತಪಡಿಸಿದೆ.
ಈ ವಿಚಾರವಾಗಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆ (ADR) ಸುಪ್ರೀಂಕೋರ್ಟ್ (Supreme Court) ಮೊರೆ ಹೋಗಿದ್ದು ಇದಕ್ಕೆ ಕೇಂದ್ರ ಚುನಾವಣಾ ಆಯೋಗ ಸ್ಪಂದಿಸಿದೆ. ಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಮತಗಟ್ಟೆವಾರು ಮತದಾನ ಪ್ರಮಾಣವನ್ನು ವೆಬ್‌ಸೈಟ್‌ನಲ್ಲಿ ನಮೂದಿಸಿದರೆ ಅದು ಗೊಂದಲ ಸ್ಥಿತಿಯನ್ನು ನಿರ್ಮಾಣ ಮಾಡುತ್ತದೆ ಎನ್ನುತ್ತಾ 225 ಪುಟಗಳ ಅಫಿಡವಿಟ್ ದಾಖಲಿಸಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 7 ನಕ್ಸಲರು ಬಲಿ
ಪ್ರತಿ ಮತಗಟ್ಟೆಯಲ್ಲಿ ಬಿದ್ದ ಮತಗಳ ಸಂಖ್ಯೆಯನ್ನು ತಿಳಿಸುವ ಫಾರಂ 17ಸಿ ಪತ್ರವನ್ನು ಬಹಿರಂಗ ಮಾಡುವಂತೆ ಎಲ್ಲಿಯೂ ನಿಯಮಗಳಿಲ್ಲ. ಸದ್ಯ ಈ 17ಸಿ ಮೂಲ ಫಾರಂಗಳನ್ನು ಸ್ಟ್ರಾಂಗ್ ರೂಂನಲ್ಲಿ ಇಡಲಾಗಿದೆ. ಕೇವಲ ಮತಗಟ್ಟೆ ಏಜೆಂಟ್‌ಗೆ ಇದರ ಕಾಪಿಯನ್ನು ಪಡೆಯಲು ಅನುಮತಿ ಇದೆ. ಅರ್ಜಿದಾರ ಕೋರಿದಂತೆ ಮತಗಟ್ಟೆವಾರು ಪೋಲಿಂಗ್ ಪ್ರಮಾಣವನ್ನು ಬಹಿರಂಗಪಡಿಸಿದರೆ ಅದು ದುರ್ಬಳಕೆ ಆಗುವ ಸಂಭವ ಇದೆ ಎಂದು ತಿಳಿಸಿದೆ. ಇದನ್ನೂ ಓದಿ: ಇಬ್ಬರು ಸಿಎಂ ಅರೆಸ್ಟ್ ಆದ್ರು.. ಬುಡಕಟ್ಟು ಸಿಎಂ ಇನ್ನೂ ಜೈಲಲ್ಲೇ ಇದ್ದಾರೆ: ರಾಹುಲ್ ಗಾಂಧಿ
ದತ್ತಾಂಶವನ್ನು ಮಾರ್ಫಿಂಗ್ ಮಾಡುವ ಸಂಭವ ಇದೆ. ಇದರಿಂದ ಗೊಂದಲ ಉಂಟಾಗಿ ಇಡೀ ಚುನಾವಣೆ ಪ್ರಕ್ರಿಯೆ ಮೇಲೆ ಜನರಲ್ಲಿ ಅಪನಂಬಿಕೆ ಮೂಡಬಹದು ಎಂಬ ಆತಂಕವನ್ನು ಆಯೋಗ ವ್ಯಕ್ತಪಡಿಸಿದೆ.
ಮತದಾನ ಪ್ರಮಾಣದಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂಬ ಆರೋಪಗಳನ್ನು ತಳ್ಳಿ ಹಾಕಿದ ಆಯೋಗ ಎಲ್ಲಿಯೂ ಲೋಪ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ. ಶುಕ್ರವಾರವೂ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಐದನೇ ಹಂತದ ಅಂತಿಮ ಮತದಾನ ಪ್ರಮಾಣ 62.2 % ರಷ್ಟು ದಾಖಲಾಗಿದೆ ಎಂದು ಆಯೋಗ ಪ್ರಕಟಿಸಿದೆ.