– ಅವಧಿ ಮೀರಿ, ದಾಖಲೆ ಇಲ್ಲದೇ ಬಾರ್ ಓಪನ್ ಮಾಡಿದ್ರೆ ಕ್ರಮದ ಎಚ್ಚರಿಕೆ
ಬೆಂಗಳೂರು: ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದೆ. ಮತದಾನಕ್ಕೆ ಕೆಲವೇ ದಿನ ಬಾಕಿ ಇದೆ. ಈ ಮಧ್ಯೆ ಬೆಂಗಳೂರು ಚುನಾವಣಾಧಿಕಾರಿಗಳು ಬಾರ್ & ರೆಸ್ಟೋರೆಂಟ್‌ಗಳಿಗೆ ಬಿಸಿ ಮುಟ್ಟಿಸಿದ್ದಾರೆ.
Advertisement
ಅವಧಿ ಮೀರಿ ಬಾರ್ ಓಪನ್ ಮಾಡಿರುವ ಒಂದು ಸಾವಿರಕ್ಕೂ ಹೆಚ್ಚು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಿದ್ದಾರೆ. ದಾಖಲೆ ಇಲ್ಲದೇ ಮದ್ಯ ಮಾರಾಟ ಮಾಡ್ತಾ ಇದ್ದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
Advertisement
Advertisement
ಚುನಾವಣಾ ಹಿನ್ನೆಲೆ ಬಾರ್ & ರೆಸ್ಟೋರೆಂಟ್‌ಗಳಿಗೆ ಚುನಾವಣಾ ಆಯೋಗ ಕೆಲವೊಂದು ನಿಯಮ ಪಾಲನೆಗೆ ಸೂಚಿಸಿದೆ. ಅದನ್ನ ಜಿಲ್ಲಾ ಚುನಾವಣಾಧಿಕಾರಿಗಳು ಮಾನಿಟರ್ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಬೆಂಗಳೂರು ನಗರದಲ್ಲಿ ಬಾರ್ & ರೆಸ್ಟೋರೆಂಟ್‌ಗಳು, ಎಂಆರ್‌ಪಿಗಳು ನಿಯಮ ಉಲ್ಲಂಘನೆ ಮಾಡುತ್ತಿವೆ. ಸಮಯ ಮುಗಿದಿದ್ದರೂ ಬಾರ್ ಓಪನ್ ಮಾಡಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದಾರೆ. ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿಗಳು ಒಂದು ಸಾವಿರಕ್ಕೆ ಹೆಚ್ಚು ಪ್ರಕರಣಗಳನ್ನ ದಾಖಲಿಸಿಕೊಂಡು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಲಾಗಿದೆಯಂತೆ.
Advertisement
ಎಂಆರ್‌ಪಿ ಶಾಪ್‌ಗಳು ಕೂಡ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅಕ್ರಮವಾಗಿ ಮದ್ಯ ಸಾಗಾಟ ಮಾಡುವುದು ಕಂಡು ಬಂದಿದ್ದು, ಮದ್ಯ ಜಪ್ತಿ ಮಾಡಿದ್ದಾರೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿ ಕೆಲವೊಂದು ಬಾರ್‌ಗಳನ್ನ ಮುಚ್ಚಿಸುವಂತಹ ಕೆಲಸಕ್ಕೆ ಮುಂದಾಗಲಿದ್ದಾರೆ.
ಬೆಂಗಳೂರಿನಲ್ಲಿ ವಿವಿಧ ಚೆಕ್‌ಪೋಸ್ಟ್ಗಳಲ್ಲಿ 2.98 ಕೋಟಿ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದು. ನಿಯಮ ಉಲ್ಲಂಘಿಸಿರುವ ಬಾರ್‌ಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.