– ನಾಳೆ ಬೃಹತ್ ರ‍್ಯಾಲಿ
-ಪಕ್ಷ ವಿರೋಧಿಗಳಿಗೆ ಕಾಂಗ್ರೆಸ್ ಎಚ್ಚರಿಕೆ
ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ತಡರಾತ್ರಿವರೆಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ಸಭೆ ನಡಿದಿದೆ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಆಯಾಯ ಜಿಲ್ಲೆಯ ಸಚಿವರಿಗೆ ಅಭ್ಯರ್ಥಿಗಳನ್ನ ಗೆಲ್ಲಿಸುವ ಹೊಣೆಯವನ್ನು ನೀಡಲಾಗಿದೆ.
ಲೋಕಸಭಾ ಚುನಾವಣೆಗೆ ಯಾವೆಲ್ಲ ರಣತಂತ್ರಗಳನ್ನು ಉಪಯೋಗಿಸಬೇಕು ಅನ್ನೋದರ ಜೊತೆಗೆ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರು, ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಕೆಲಸ ಮಾಡಬೇಕು ಹಾಗೂ ಯಾವುದೇ ಪಕ್ಷ ವಿರೋಧಿ ಚಟುವಟಿಗಳಿಗೆ ಅವಕಾಶ ನೀಡಬಾರದು. ಒಂದು ವೇಳೆ ನೀಡಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಎಚ್ಚರಿಯನ್ನು ನೀಡಲಾಗಿದೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತಾಡಿದ ವೇಣುಗೋಪಾಲ್, ಮೋದಿ ಒಬ್ಬ ಸುಳ್ಳುಗಾರ, ಪೊಳ್ಳು ಭರವಸೆಗಳನ್ನು ಕೊಟ್ಟು ಜನರನ್ನು ಯಾಮಾರಿಸಿದ್ದಾರೆ. ಐಟಿ ಇಲಾಖೆಯನ್ನು ಬಳಸಿಕೊಂಡು ರಾಜಕೀಯ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದೇ 31 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ರಾಹುಲ್ ಗಾಂಧಿ ಬರಲಿದ್ದಾರೆ. ಎಚ್.ಡಿ ದೇವೇಗೌಡ ಮತ್ತು ರಾಹುಲ್ ಗಾಂಧಿ ನಾಯಕತ್ವದಲ್ಲಿ ಅದ್ಧೂರಿ ಸಮಾವೇಶ ನಡೆಯಲಿದೆ ಎಂದರು.