ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಕ್ಷೇತ್ರದ ಲೋಕಸಭಾ ಚುನಾವಣೆಯ ಫಲಿತಾಂಶ (Loksabha Election Result) ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆದ್ದಿದ್ದಾರೆ.
ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಹಾಗೂ ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಡಳಿತ ನಡೆಸಿರುವ ಅನುಭವವಿರುವ ಗೋವಿಂದ ಕಾರಜೋಳ ಅವರು ರಾಜ್ಯದ ಹಿರಿಯ ರಾಜಕಾರಣಿಯೂ ಹೌದು. ಇದೀಗ ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಅವರ ವಿರುದ್ಧ 48,121 ಮತಗಳ ಅಂತರದಿಂದ ಗೆದ್ದಿದ್ದಾರೆ. ಗೋವಿಂದ ಕಾರಜೋಳ ಅವರಿಗೆ 6,84,890 ಮತಗಳು ಬಿದ್ದರೆ, ಬಿ.ಎನ್ ಚಂದ್ರಪ್ಪ ಅವರಿಗೆ 6,36,769 ಮತಗಳು ಬಿದ್ದಿವೆ.
Advertisement
Advertisement
ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ ಅವರು, ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇನೆ. ನಾನು ನೇರವಾಗಿ ನಾಮಪತ್ರ ಸಲ್ಲಿಕೆಗೆ ದುರ್ಗಕ್ಕೆ ಬಂದಂತಾಗಿದೆ. ಮೋದಿಯವರ 10 ವರ್ಷದ ಆಡಳಿತ, ಎರಡು ಪಕ್ಷಗಳ ಅಧ್ಯಕ್ಷರು,ಕಾರ್ಯಕರ್ತರ ಶ್ರಮದ ಫಲವೇ ಗೆಲುವಾಗಿದೆ. ಜಲಸಂಪನ್ಮೂಲ ಸಚಿವನಾಗಿದ್ದಾಗ ಚಿತ್ರದುರ್ಗಕ್ಕೆ ನೀರು ತರುವ ಕೆಲಸ ಸಚಿವ, ಡಿಸಿಎಂ ಆಗಿ ಸೇವೆ ಸಲ್ಲಿಸಿದ್ದು ಗಮನಿಸಿ ಮತ ನೀಡಿದ್ದಾರೆ ಎಂದರು. ಇದನ್ನೂ ಓದಿ: ಹಾವೇರಿಯಲ್ಲಿ ಬೊಮ್ಮಾಯಿಗೆ ಗೆಲುವು
Advertisement
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಮೋಸದಾಟ ಮಾಡಿದೆ. ಜಿಲ್ಲಾಸಚಿವರು, ಬೋರ್ಡ್ ಛೇರ್ಮನ್, ಶಾಸಕರನ್ನು ಹಿಂದಿಟ್ಟು ಬಿಜೆಪಿ ಕಾರ್ಯಕರ್ತರು ನನ್ನ ಗೆಲ್ಲಿಸಿದ್ದಾರೆ. ಕೇಂದ್ರದಲ್ಲಿ ಎನ್ ಡಿ ಎ ಮತ್ತೆ ಅಧಿಕಾರ ಹಿಡಿಯಲಿದೆ. ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆದ್ಯತೆ. ಎನ್ ಡಿಎ ಅಧಿಕಾರಕ್ಕೆ ಬಂದರೆ ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುವೆ ಎಂದು ಹೇಳಿದರು.