Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‌ ಗಾಂಧಿಗೆ ಡಬಲ್‌ ಧಮಾಕ – ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿದ ರಾಯ್‌ ಬರೇಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ರಾಹುಲ್‌ ಗಾಂಧಿಗೆ ಡಬಲ್‌ ಧಮಾಕ – ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿದ ರಾಯ್‌ ಬರೇಲಿ

Election News

ರಾಹುಲ್‌ ಗಾಂಧಿಗೆ ಡಬಲ್‌ ಧಮಾಕ – ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿದ ರಾಯ್‌ ಬರೇಲಿ

Public TV
Last updated: June 4, 2024 9:33 pm
Public TV
Share
2 Min Read
Rahul Gandi
SHARE

ಲಕ್ನೋ/ತಿರುವನಂತರಪುರಂ: ಉತ್ತರ ಪ್ರದೇಶದ ಪ್ರತಿಷ್ಠೆಯ ಕಣವಾಗಿದ್ದ ರಾಯ್‌ ಬರೇಲಿ (Raebareli) ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ (Rahul Gandhi) ಗೆಲುವು ಸಾಧಿಸಿದ್ದು, ಪ್ರಸ್ತುತ ಕ್ಷೇತ್ರವನ್ನ ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಕೇರಳದ ವಯನಾಡಿನಲ್ಲೂ ಭರ್ಜರಿ ಗೆಲುವು ಸಾಧಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ರಾಹುಲ್‌ ಗಾಂಧಿ ತಾವು ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ. ಉತ್ತರ ಪ್ರದೇಶದ (Uttar Pradesh) ರಾಯ್‌ಬರೇಲಿ ಕ್ಷೇತ್ರದಲ್ಲಿ 6,87,649 ಮತಗಳನ್ನು ಪಡೆಯುವ ಮೂಲಕ 3,90,030 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ದಿನೇಶ್‌ ಪ್ರತಾಪ್‌ ಸಿಂಗ್‌ 2,97,619 ಮತಗಳನ್ನು ಪದು ಸೋಲೊಪ್ಪಿಕೊಂಡಿದ್ದಾರೆ.

ಇನ್ನೂ ಕೇರಳದ ವಯನಾಡ್‌ ಕ್ಷೇತ್ರದಲ್ಲಿ (Wayanad Constituency)  6,47,445 ಮತಗಳನ್ನು ಪಡೆದು ಗೆಲುವು ಸಾಧಿಸಿರುವ ರಾಹುಲ್‌ 3,64,422 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಪ್ರತಿಸ್ಪರ್ಧಿ ಕಮ್ಯೂನಿಸ್ಟ್‌ ಪಕ್ಷದ ಅನ್ನಿ ರಾಜಾ 2,83,023 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್‌ 1,41,045 ಮತಗಳನ್ನು ಪಡೆದು ನಿರಾಸೆ ಅನುಭವಿಸಿದೆ. ಇದನ್ನೂ ಓದಿ: ಒಡಿಶಾದಲ್ಲಿ ಬಿಜೆಡಿ ಕೋಟೆ ಛಿದ್ರ – ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ

ಗಾಂಧಿ ಕುಟುಂಬಕ್ಕುಂಟು ರಾಯ್‌ ಬರೇಲಿ ನಂಟು:
ರಾಯ್‌ಬರೇಲಿ ಲೋಕಸಭೆ ಚುನಾವಣಾ ಇತಿಹಾಸ ಸಾಕಷ್ಟು ಕುತೂಹಲಕಾರಿ ಘಟ್ಟಗಳನ್ನು ನೋಡಿದೆ. 1951-52 ರಲ್ಲಿ ನಡೆದ ಮೊದಲ ಲೋಕಸಭಾ ಚುನಾವಣೆಯಲ್ಲಿ ರಾಯ್‌ಬರೇಲಿ ಮತ್ತು ಪ್ರತಾಪಗಢ ಜಿಲ್ಲೆಗಳನ್ನು ಒಳಗೊಂಡ ಒಂದು ಲೋಕಸಭಾ ಸ್ಥಾನವಿತ್ತು. ಇಂದಿರಾ ಗಾಂಧಿ ಅವರ ಪತಿ ಫಿರೋಜ್ ಗಾಂಧಿ ಅವರು ಇಲ್ಲಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆದ್ದಿದ್ದರು. 1957 ರಲ್ಲಿ ರಾಯ್‌ಬರೇಲಿ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗ ಫಿರೋಜ್ ಗಾಂಧಿ ಮತ್ತೊಮ್ಮೆ ಇಲ್ಲಿಂದ ಸಂಸದರಾದರು. ಇದನ್ನೂ ಓದಿ: ರಾಹುಲ್ ಗಾಂಧಿ ನಾಯಕತ್ವಕ್ಕೆ ಬೆಂಬಲ ಸಿಕ್ಕಿದೆ, ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಸೋಲಾಗಿದೆ: ಸಿಎಂ

1960 ರಿಂದ ರಾಯ್‌ಬರೇಲಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಫಿರೋಜ್ ಗಾಂಧಿ, ಇಂದಿರಾ ಗಾಂಧಿ ಕೂಡಾ ಇಲ್ಲಿಂದ ಸ್ಪರ್ಧಿಸಿದ್ದರು. 1952 ಮತ್ತಯ 1957 ರಲ್ಲಿ ರಾಯ್‌ಬರೇಲಿ ಕ್ಷೇತ್ರದಿಂದ ಫಿರೋಜ್‌ ಗಾಂಧಿ ಎರಡು ಬಾರಿ ಗೆದ್ದಿದ್ದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಮೊಮ್ಮಗ ಅರುಣ್ ನೆಹರು ಅವರು 1980ರ ಉಪಚುನಾವಣೆ ಮತ್ತು 1984ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ನೆಹರೂ ಸಹೋದರಿ ಶೀಲಾ ಕೌಲ್ 1989 ಮತ್ತು 1991 ರಲ್ಲಿ ಗೆಲುವು ಸಾಧಿಸಿದರು.

ಅಲ್ಲದೇ 2006 ರಿಂದ ಸೋನಿಯಾ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು‌. ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾಗಿದ್ದರಿಂದ ಕಣಕ್ಕಿಳಿದಿದ್ದ ರಾಹುಲ್‌ ಗಾಂಧಿ ಮತ್ತೆ ರಾಯ್‌ ಬರೇಲಿಯನ್ನು ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ಕೈ ಹಿಡಿದ ಮಹಾದೇವಪುರ – ಸತತ 4ನೇ ಬಾರಿ ಪಿಸಿ ಮೋಹನ್‌ಗೆ ಜಯ

TAGGED:congressElections ResultsRaebareliRahul Gandhiuttar pradeshWayanadಕಾಂಗ್ರೆಸ್ರಾಯ್‌ ಬರೇಲಿರಾಹುಲ್ ಗಾಂಧಿಲೋಕಸಭಾ ಚುನಾವಣೆವಯನಾಡ್
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Gurugram Husband Kills Wife Over Dowry
Crime

4 ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆ – ವರದಕ್ಷಿಣೆಗಾಗಿ ಪತ್ನಿಯನ್ನು ಕೊಂದ ಪತಿ

Public TV
By Public TV
5 minutes ago
Helicopter
Latest

ಕತಾರ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನ – 6 ಮಂದಿ ಸಾವು, ಓರ್ವ ನಾಪತ್ತೆ

Public TV
By Public TV
38 minutes ago
s.s.mallikarjun b form
Bengaluru City

ದಾವಣಗೆರೆ ಟಿಕೆಟ್‌ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ: ಎಸ್‌.ಎಸ್‌.ಮಲ್ಲಿಕಾರ್ಜುನ್‌

Public TV
By Public TV
43 minutes ago
DK Shivakumar
Bagalkot

ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ: ಡಿಕೆಶಿ

Public TV
By Public TV
1 hour ago
DGP Ramachandra Rao copy
Bengaluru City

ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋಗಳು AI ಅಲ್ಲ, ಅಸಲಿ ಅಂತ SITಯಿಂದ ರಿಪೋರ್ಟ್

Public TV
By Public TV
1 hour ago
basavaraj bommai 1
Districts

ಕೆರೆ ಹೂಳೆತ್ತಲು ರಾಜ್ಯ ಸರ್ಕಾರ ಪ್ರತ್ಯೇಕ ಹಣ ಮೀಸಲಿಡಬೇಕು: ಬೊಮ್ಮಾಯಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?