ನವದೆಹಲಿ: ಇಂದು ದೆಹಲಿಯಲ್ಲಿ ಸಭೆ ಸೇರಿ ಇಂಡಿಯಾ (INDIA) ಒಕ್ಕೂಟ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಹೇಳಿದ್ದಾರೆ.
ನಮ್ಮ ಭಾರತ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸಿ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧರಿಸಿದ್ದೇವೆ. ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ. ಎಲ್ಲಾ ದೇಶಭಕ್ತರು ಮತ್ತು ಬಿಜೆಪಿಯಿಂದ ಕಿರುಕುಳಕ್ಕೊಳಗಾದ ಎಲ್ಲರೂ ಸಭೆ ಸೇರುತ್ತೇವೆ. ಚಂದ್ರಬಾಬು ನಾಯ್ಡು (Chandrababu Naidu) ಕೂಡ ಬಿಜೆಪಿ ಸರ್ಕಾರದಿಂದ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಠಾಕ್ರೆ ಹೇಳಿದರು.
Advertisement
Advertisement
Advertisement
ಇಂಡಿಯಾ ಮೈತ್ರಿಯು ಮಹಾರಾಷ್ಟ್ರದಲ್ಲಿ (Maharashtra) ಮತ್ತು ರಾಷ್ಟ್ರದಾದ್ಯಂತ ನಿಜವಾಗಿಯೂ ಉತ್ತಮವಾಗಿ ಕೆಲಸ ಮಾಡಿದೆ. ಭಾರತದಲ್ಲಿ ದುರಹಂಕಾರಕ್ಕೆ ಸ್ಥಾನವಿಲ್ಲ ಎಂದು ನಾವು ತೋರಿಸಿದ್ದೇವೆ. ಸಂವಿಧಾನ ವಿರೋಧಿ ಶಕ್ತಿಗಳು, ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಭಾರತದಲ್ಲಿ ಸ್ಥಾನವಿಲ್ಲ ಎಂದರು.
Advertisement
ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು ಮಹಾ ವಿಕಾಸ ಅಘಾಡಿ ಮೈತ್ರಿ ಹೆಚ್ಚು ಸ್ಥಾನ ಗೆದ್ದುಕೊಂಡಿದೆ. ಒಟ್ಟು 48 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 13, ಬಿಜೆಪಿ 9, ಶಿವಸೇನೆ (ಉದ್ಧವ್ ಠಾಕ್ರೆ) 9, ಎನ್‌ಸಿಪಿ( ಶರಾದ್ ಪವಾರ್) 8, ಶಿಂಧೆ(ಶಿವಸೇನೆ) 7 ಸ್ಥಾನವನ್ನು ಗೆದ್ದುಕೊಂಡಿದೆ. ಇದನ್ನೂ ಓದಿ: ಮೊದಲ ಹಂತದಲ್ಲೇ ಬಿಜೆಪಿಗೆ ಭಾರೀ ಹಿನ್ನಡೆ – ಮಿಡಲ್ ಓವರ್‌ನಲ್ಲಿ ಹೆಚ್ಚು ಸ್ಕೋರ್ – ಯಾವ ಹಂತದಲ್ಲಿ ಯಾರಿಗೆ ಎಷ್ಟು ಸ್ಥಾನ?
2019 ರಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ 43 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಯುಪಿಎ ಮೈತ್ರಿ ಕೇವಲ 5 ಸ್ಥಾನ ಮಾತ್ರ ಗೆದ್ದುಕೊಂಡಿತ್ತು.