ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ (Pratap Simha) ಅವರನ್ನ ದಯವಿಟ್ಟು ಗೆಲ್ಲಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕರೆ ನೀಡಿದ್ದಾರೆ.
ಮೈಸೂರಿನ (Mysuru) ರಾಜೀವ್‌ನಗರದಲ್ಲಿ ನಡೆದ ಅಲ್ ಬದರ್ ಸರ್ಕಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ನರೇಂದ್ರ ಮೋದಿ (Narendra Modi) ಪ್ರಧಾನಿಯಾಗಿ 9 ವರ್ಷಗಳಾಯಿತು. ಇಷ್ಟು ವರ್ಷದಲ್ಲಿ ಅವರು ಬರೀ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದೂ ಮುಸ್ಲಿಂ, ಹಿಜಬ್, ಹಲಾಲ್ ಕಟ್ ವಿಚಾರಗಳನ್ನ ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯವನ್ನೇ ಹಾಳು ಮಾಡಿದ್ದಾರೆ. ಹೀಗಾಗಿ ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನ ಸಂಸತ್ತಿಗೆ ಆಯ್ಕೆ ಮಾಡಬೇಡಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ: ಸಿಎಂ
Advertisement
Advertisement
ಬಿಜೆಪಿಯವರು ಸಮಾಜ ವಿರೋಧಿ ಶಕ್ತಿಗಳು. ಮೋದಿ ಅವರು ಅಚ್ಚೆ ದಿನ್ ಅಂತ ಹೇಳುತ್ತಾರೆ. ಆದ್ರೆ ನಿಜವಾದ ಒಳ್ಳೆಯ ದಿನಗಳನ್ನು ನಾವು ತಂದು ಕೊಟ್ಟಿದ್ದೇವೆ. ಮುಂದಿನ ಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಚಿವ ಸಂಪುಟ ಉಪಸಮಿತಿ ಸಭೆಯ ಬಳಿಕ ಬರ ಘೋಷಣೆ ಬಗ್ಗೆ ತೀರ್ಮಾನ: ಸಿಎಂ
Web Stories