– ಇಂಡಿಯಾ ಒಕ್ಕೂಟಕ್ಕೆ ಬೆಂಬಲ
ಪಾಟ್ನಾ: ಲೋಕಸಭೆ ಚುನಾವಣೆಗೆ (Lok Sabha Election) ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಚಿರಾಗ್ ಪಾಸ್ವಾನ್ (Chirag Paswan) ನೇತೃತ್ವದ ಲೋಕ ಜನಶಕ್ತಿ ಪಕ್ಷದ (Lok Janshakti Party) 22 ನಾಯಕರು ಏಕಕಾಲದಲ್ಲಿ ರಾಜೀನಾಮೆ (Resignation) ಸಲ್ಲಿಸಿದ್ದಾರೆ.
Advertisement
ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್‌ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಡಾಂಗಿ ಸೇರಿದ್ದಾರೆ. ಹಣಕ್ಕಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನೂ ಓದಿ: ನಾನು ಸನಾತನ ವಿರೋಧಿ ಘೋಷಣೆ ಕೂಗಲ್ಲ – ಕಾಂಗ್ರೆಸ್‌ಗೆ ಗೌರವ್ ವಲ್ಲಭ್ ರಾಜೀನಾಮೆ
Advertisement
ಪಕ್ಷಕ್ಕೆ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದೆ ರೇಣು ಕುಶ್ವಾಹಾ, ಹೊರಗಿನವರಿಗೆ ಟಿಕೆಟ್ ಕೊಡುವ ಬದಲು ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ನಾವ್ಯಾರು ಸಮರ್ಥರು ಇಲ್ವಾ? ನಾವು ಪಕ್ಷಕ್ಕಾಗಿ ಕಾರ್ಮಿಕರಾಗಿ ಸೇವೆ ಸಲ್ಲಿಸಲು ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೈಸೂರಿನಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ
Advertisement
Advertisement
ಇನ್ನು ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಮತ್ತು ಎಲ್‌ಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ಬಂಡಾಯ ಎಲ್‌ಜೆಪಿ ನಾಯಕರು ಈಗ ಇಂಡಿಯಾ ಒಕ್ಕೂಟವನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು
ದೇಶದಲ್ಲಿ ಇಂತಹ ಮಹತ್ವದ ಚುನಾವಣೆಗಳು ನಡೆಯುತ್ತಿರುವಾಗ ಎಲ್‌ಜೆಪಿ ವರಿಷ್ಠರು ಪಕ್ಷದವರಿಗೆ ಟಿಕೆಟ್ ನೀಡದೆ ಕಾರ್ಯಕರ್ತರನ್ನು ಬೆಚ್ಚಿ ಬೀಳಿಸಿದ್ದಾರೆ. ‘ಚಿರಾಗ್ ಪಾಸ್ವಾನ್‌ಗೆ ಜಯವಾಗಲಿ’ ಎಂಬ ಘೋಷಣೆಗಳನ್ನು ಹಗಲಿರುಳು ಎಬ್ಬಿಸುತ್ತಿದ್ದ ಜನರು ‘ಹೊಸ ಬಿಹಾರ’ದ ನಿರೀಕ್ಷೆಯಲ್ಲಿದ್ದರು. ಇದೀಗ ಅವರಿಗೆ ದ್ರೋಹ ಮಾಡಲಾಗಿದೆ. ಅವರ ಆಕಾಂಕ್ಷೆಗಳನ್ನು ಪುಡಿಮಾಡಲಾಗಿದೆ. ಈಗ ದೇಶವನ್ನು ಉಳಿಸಲು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕು. ಹಾಗಾಗಿ ನಾವು ಇಂಡಿಯಾ ಒಕ್ಕೂಟವನ್ನು ಬೆಂಬಲಿಸುತ್ತೇವೆ ಎಂದರು. ಇದನ್ನೂ ಓದಿ: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ
ಪಕ್ಷದ ಸಂಘಟನಾ ಕಾರ್ಯದರ್ಶಿ ರವೀಂದ್ರ ಸಿಂಗ್ ಅವರು ಚಿರಾಗ್ ಪಾಸ್ವಾನ್ ಟಿಕೆಟ್ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಚಿರಾಗ್ ಪಾಸ್ವಾನ್ ಅವರು ಬಿಹಾರದ ಜನರೊಂದಿಗೆ ಭಾವನಾತ್ಮಕ ಆಟವಾಡಿದ್ದಾರೆ. ನಮ್ಮ ಪರಿಶ್ರಮದಿಂದ ಐದು ಸೀಟುಗಳು ಸಿಕ್ಕಾಗ ಆ ಎಲ್ಲಾ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ. ಅವರಿಗೆ ಬಿಹಾರದ ಜನರು ಉತ್ತರ ನೀಡಲಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಸಿಲಿನ ಬೇಗೆಗೆ ಬೆಂಗಳೂರು ತತ್ತರ – 8 ವಲಯಗಳಲ್ಲಿ ದಾಖಲೆಯ ತಾಪಮಾನ
ಬಿಹಾರದ 40 ಲೋಕಸಭಾ ಸ್ಥಾನಗಳ ಪೈಕಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ವೈಶಾಲಿ, ಹಾಜಿಪುರ್, ಸಮಸ್ತಿಪುರ್, ಖಗಾರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಬಿಹಾರದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ ಏಪ್ರಿಲ್ 19, ಎರಡನೇ ಹಂತ ಏಪ್ರಿಲ್ 26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25 ಮತ್ತು ಏಳನೇ ಹಂತ ಜೂನ್ 1 ರಂದು ನಡೆಯಲಿದೆ. ಇದನ್ನೂ ಓದಿ: ತೀವ್ರ ಬರ – ಯಾದಗಿರಿ ಜಿಲ್ಲೆಯ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ