ಮುಂಬೈ: ಮಹಾರಾಷ್ಟ್ರ (Maharashtra) ಕಾಂಗ್ರೆಸ್ ಕಾರ್ಯಾಧ್ಯಕ್ಷ ನಸೀಮ್ ಖಾನ್ (Naseem Khan) ಪಕ್ಷದ ವಿರುದ್ಧ ಸಿಟ್ಟಾಗಿದ್ದು ಪ್ರಚಾರದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್‌ಗೆ (Congress) ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್ ಅಭ್ಯರ್ಥಿ (Muslim Candidate) ಬೇಡ ಎಂದು ಹೇಳಿರುವ ನಸೀಮ್ ಖಾನ್ ಇನ್ನು ಮುಂದೆ ನಾನು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.
Advertisement
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ (Lok Sabha Election) ಮಹಾ ವಿಕಾಸ್ ಅಘಾಡಿ (MVA) ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಪತ್ರ ಬರೆದು ಪ್ರಚಾರದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮತದಾನ ಮುಗಿದ ಬೆನ್ನಲ್ಲೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ
Advertisement
Advertisement
ಉತ್ತರ ಪ್ರದೇಶದ (80) ನಂತರ ಮಹಾರಾಷ್ಟ್ರದಲ್ಲಿ(48) ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳಿವೆ. ಎನ್‌ಸಿಪಿ-ಎಸ್‌ಪಿ, ಕಾಂಗ್ರೆಸ್ ಮತ್ತು ಶಿವಸೇನಾ ಯುಬಿಟಿಯನ್ನು ಒಳಗೊಂಡಿರುವ ಎಂವಿಎ ಒಕ್ಕೂಟ ಹೊಂದಿರುವ ಮಹಾರಾಷ್ಟ್ರದಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಮಹಾರಾಷ್ಟ್ರದಾದ್ಯಂತ ಅನೇಕ ಮುಸ್ಲಿಂ ಸಂಘಟನೆಗಳು, ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಅಲ್ಪಸಂಖ್ಯಾತ ಸಮುದಾಯದಿಂದ ಕನಿಷ್ಠ ಒಬ್ಬ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕೆ ಇಳಿಸಬಹುದು ಎಂದು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ದುರದೃಷ್ಟವಶಾತ್ ಸಾಧ್ಯವಾಗಲಿಲ್ಲ ಎಂದು ಕಿಡಿಕಾರಿದ್ದಾರೆ.
Advertisement
ಈ ವಿಷಯವನ್ನು ಎತ್ತುತ್ತಿರುವ ಮಹಾರಾಷ್ಟ್ರದ ಮುಸ್ಲಿಮರಿಗೆ ತನ್ನ ಬಳಿ ಉತ್ತರವಿಲ್ಲ ಎಂದು ಹೇಳಿದ ಖಾನ್ ಮಹಾರಾಷ್ಟ್ರ ಕಾಂಗ್ರೆಸ್ ಪ್ರಚಾರ ಸಮಿತಿಗೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.
ನಸೀಮ್ ಖಾನ್ ಮುಂಬೈ ಉತ್ತರ ಕ್ಷೇತ್ರದ ಟಿಕೆಟ್ ಅಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಈ ಕ್ಷೇತ್ರಕ್ಕೆ ನಗರ ಘಟಕದ ಅಧ್ಯಕ್ಷೆ ವರ್ಷಾ ಗಾಯಕ್ವಾಡ್ ಅವರಿಗೆ ಟಿಕೆಟ್ ನೀಡಿದೆ. ಖಾನ್ ಅವರು 2019 ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ ಚಂಡಿವಾಲಿಯಿಂದ ಸ್ಪರ್ಧಿಸಿ 409 ಮತಗಳಿಂದ ಸೋತಿದ್ದರು.