ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ (Violation Of Election Code) ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು (Udupi Chikkamgaluru) ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojary) ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಕೋಟಾ ಶ್ರೀನಿವಾಸ ಪೂಜಾರಿ, ಗುರುಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ಇವಿಎಂನಲ್ಲೇ ಚುನಾವಣೆ, ಸ್ಲಿಪ್ ಮತದಾರನ ಕೈಗೆ ಸಿಗಬೇಕು : ಕಾಂಗ್ರೆಸ್ ಪ್ರಣಾಳಿಕೆ
Advertisement
Advertisement
ಮಾರ್ಚ್ 30 ರಂದು ಕಠಪಾಡಿ ಖಾಸಗಿ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಲಾಗಿತ್ತು.
Advertisement
ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಸಮನ್ಸ್ ಜಾರಿ ಮಾಡಿ ಮೇ 27ಕ್ಕೆ ವಿಚಾರಣೆಯನ್ನು ಮುಂದೂಡಿದೆ.
Advertisement