Sunday, 15th December 2019

20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

ಬೆಂಗಳೂರು: ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ ಎದ್ದಿದೆ.

Image result for yeddyurappa

ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ಸಿನ 20 ಶಾಸಕರು ಯಡಿಯೂರಪ್ಪನವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗಿದ್ದು, ಯಡಿಯೂರಪ್ಪ ಅವರಿಗೆ ಸುಮಾರು 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಫೋನ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಸಿಎಂ ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರುವಾಯ್ತಾ ಎನ್ನುವ ಪ್ರಶ್ನೆ ಎದ್ದಿದೆ.

Leave a Reply

Your email address will not be published. Required fields are marked *