ಚಿತ್ರದುರ್ಗ: ಕೋಟೆನಾಡಿನಲ್ಲೂ ಕಾಂಗ್ರೆಸ್ಸಿಗೆ ಬಂಡಾಯದ ಬಿಸಿ ತಟ್ಟಲಿದ್ದು, ಕೈ ಬಂಡಾಯ ಅಭ್ಯರ್ಥಿ ಕಣಕ್ಕೆ ಇಳಿಯಲು ನಿರ್ಧಾರ ಮಾಡಿದ್ದಾರೆ.
ಪಕ್ಷೇತರ ಆಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಕಾಂಗ್ರೆಸ್ ಟಿಕೆಟ್ ವಂಚಿತ ಡಾ.ಬಿ ತಿಪ್ಪೇಸ್ವಾಮಿ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಸಂಸದ ಬಿ.ಎನ್ ಚಂದ್ರಪ್ಪ ಮತ್ತು ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ಇಬ್ಬರು ಹೊರಗಿನರಾಗಿದ್ದಾರೆ. ಹೀಗಾಗಿ ರಾಷ್ಟ್ರೀಯ ಪಕ್ಷಗಳ ವಲಸಿಗ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.
Advertisement
Advertisement
ಡಾ. ತಿಪ್ಪೇಸ್ವಾಮಿ 2009 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ ಈಗ ಕಾಂಗ್ರೆಸ್ ಪಕ್ಷದ ಪ್ರಾಥಾಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ತಿಪ್ಪೇಸ್ವಾಮಿ ಎರಡು ಪಕ್ಷಗಳಿಂದ ಟಿಕೆಟ್ ಕೇಳಿದ್ದರು. ಒಂದೆಡೆ ಬಿಜೆಪಿಯಿಂದ ಟಿಕೆಟ್ ಸಿಗುವ ಭರವಸೆಯಿಂದ ಕಾಂಗ್ರೆಸ್ಸಿಗೆ ರಾಜಿನಾಮೆ ಕೂಡ ನೀಡಿದ್ದರು. ಈಗ ಅಂತಿಮವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಸಜ್ಜಾಗಿದ್ದು ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ.
Advertisement
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಿಂದ ಹೊರಗಿನ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಆದ್ದರಿಂದ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳನ್ನು ಕಡೆಗಣನೆ ಮಾಡಲಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳಿಂದ ಸ್ಥಳೀಯರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement