ನವದೆಹಲಿ: ಮುಂಬರುವ ಲೋಕಸಭಾ ಚುನಾವಣಾ ದಿನಾಂಕದ ವೇಳಾ ಪಟ್ಟಿ ಫೆಬ್ರವರಿ ಕೊನೆಯಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗ ಫೆ.27 ರ ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದು ಈ ದಿನ ಚುನಾವಣಾ ದಿನಾಂಕಗಳು ಪ್ರಕಟವಾಗುವ ಸಾಧ್ಯತೆಯಿದೆ.
ಸೂಕ್ಷ್ಮ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು 6 ರಿಂದ 7 ಹಂತಗಳಲ್ಲಿ ಚುನಾವಣೆ ನಡೆಸಲು ಚಿಂತನೆ ನಡೆದಿದೆ. ಇದರಿಂದಾಗಿ ಏಪ್ರಿಲ್ 15 ಅಥವಾ 20ರೊಳಗೆ ಮೊದಲ ಹಂತದ ಚುನಾವಣೆ ಆರಂಭವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
Advertisement
Advertisement
ಮೇ ಮೊದಲ ವಾರ ಅಥವಾ 2ನೇ ವಾರದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಕಳೆದ ಬಾರಿಯಂತೆ ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ ಎನ್ನಲಾಗಿದೆ. ದೇಶಾದ್ಯಂತ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ ಘೋಷಣೆ ಆಗುವ ದಿನಾಂಕದಿಂದ ಚುನಾವಣಾ ಫಲಿತಾಂಶ ಬರುವ ವೇಳೆಗೆ ಸುಮಾರು 2 ತಿಂಗಳ ಸಮಯವಕಾಶ ಬೇಕಾಗುತ್ತದೆ.
Advertisement
ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ತಮ್ಮ ಗುರುವಾರದ ಪ್ರವಾಸವನ್ನು ರದ್ದು ಮಾಡಿದ್ದಾರೆ. ನಿಗದಿತ ವೇಳಾಪಟ್ಟಿಯ ಪ್ರಕಾರ ನಾಳೆ ಮೋದಿ ಅವರು ಉತ್ತರ ಪ್ರದೇಶದ ಅಮೇಥಿಗೆ ತೆರಳಬೇಕಿತ್ತು. ಆದರೆ ಈಗ ದಿನಾಂಕವನ್ನು ಮುಂದೂಡಿ ಫೆ.27ಕ್ಕೆ ಫಿಕ್ಸ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಸ್ವಕ್ಷೇತ್ರ ಆಗಿರುವ ಹಿನ್ನೆಲೆಯಲ್ಲಿ ಅಮೇಥಿಗೆ ತೆರಳಿ ಅಲ್ಲಿಂದಲೇ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದರಾ ಎನ್ನುವ ಪ್ರಶ್ನೆ ಎದ್ದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv