ಎಲ್ಲ ಕ್ಷೇತ್ರಗಳಲ್ಲಿ ಒಂದು ಅದೃಷ್ಟದ ಕ್ಷೇತ್ರ ಅಂತ ಇರುತ್ತದೆ. ಅದೇ ರೀತಿಯಾಗಿ ಲೋಕಸಭಾ ಚುನಾವಣೆಯಲ್ಲೂ ಒಂದು ಅದೃಷ್ಟದ ಕ್ಷೇತ್ರ ಇದೆ. ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೋ ಆ ಪಕ್ಷವೇ ಕೇಂದ್ರದಲ್ಲಿ ಅಧಿಕಾರ ಹಿಡಿಯುವುದು ವಿಶೇಷ.
ಹರ್ಯಾಣ ರಾಜ್ಯದಲ್ಲಿ ಕೈಗಾರಿಕೆಗಳು ಹೆಚ್ಚಾಗಿರುವ ಫರಿದಾಬಾದ್ ಕ್ಷೇತ್ರ ತನ್ನ ವಿಶೇಷತೆಯಿಂದಲೇ ಇಡೀ ದೇಶದಲ್ಲಿ ಗುರುತಿಸಿಕೊಂಡಿದೆ. 1951 ರಿಂದ 1976ರವರೆಗೆ ಇದು ಲೋಕಸಭಾ ಕ್ಷೇತ್ರವಾಗಿರಲಿಲ್ಲ. 1977 ರಲ್ಲಿ ಲೋಕಸಭಾ ಕ್ಷೇತ್ರವಾದ ಬಳಿಕ ನಡೆದ 11 ಚುನಾವಣೆಯಲ್ಲಿ ಇಲ್ಲಿ ಗೆದ್ದ ಪಕ್ಷವೇ ಕೇಂದ್ರದಲ್ಲಿ ಅಧಿಕಾರ ಹಿಡಿದು ಅಚ್ಚರಿ ಮೂಡಿಸಿದೆ.
Advertisement
Advertisement
ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ ನಂತರ ನಡೆದ ಚುನಾವಣೆಯನ್ನು ಜನತಾ ಪಕ್ಷ ಗೆದ್ದುಕೊಂಡಿದೆ. ಆದರೆ 1980 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದ ಜನತೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ. 1980 ರಿಂದ 1991 ರವರೆಗಿನ ಸಮಯದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿತ್ತು. 1980, 1984, 1989, 1991ರ ನಾಲ್ಕು ಚುನಾವಣೆಯಲ್ಲೂ ಕಾಂಗ್ರೆಸ್ ಜಯಗಳಿಸಿತ್ತು.
Advertisement
1996, 1998, 1999 ರಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರ ರಚಿಸಿತ್ತು. ಈ ಸಂದರ್ಭದಲ್ಲೂ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸಿದ್ದರು. 2004 ಮತ್ತು 2009 ರಲ್ಲಿ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದರೆ 2014 ರಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣ ಪಾಲ್ ಗುರ್ಜರ್ ಜಯಗಳಿಸಿದ್ದರು.
Advertisement