ನವ ದೆಹಲಿ: ಲೋಕಸಭಾ ಚುನಾವಣೆ 2024ಕ್ಕೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ (SP) ಕಾಂಗ್ರೆಸ್‌ನ ಸೀಟು ಹಂಚಿಕೆ ಒಪ್ಪಂದದ ಬಳಿಕ ಆಮ್ ಆದ್ಮಿ ಪಕ್ಷವು (AAP) ದೆಹಲಿ, ಗುಜರಾತ್, ಅಸ್ಸಾಂ ಮತ್ತು ಹರಿಯಾಣದಲ್ಲಿ ಸ್ಥಾನಗಳ ಬಗ್ಗೆ ಹಳೆಯ ಪಕ್ಷದೊಂದಿಗೆ ಸಹಮತ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಉಭಯ ಪಕ್ಷಗಳ ನಾಯಕರ ನಡುವೆ ಹಲವಾರು ಸುತ್ತಿನ ಮಾತುಕತೆಯ ನಂತರ ಅವರು ಸ್ಪರ್ಧಿಸುವ ಸ್ಥಾನಗಳ ಸಂಖ್ಯೆಯ ಬಗ್ಗೆ ಒಪ್ಪಂದಕ್ಕೆ ಒಪ್ಪಿಗೆ ನೀಡಲಾಗಿದೆ ಎನ್ನಲಾಗಿದೆ. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು, ಮೈತ್ರಿ ಕುರಿತು ಮಾತುಕತೆ ವಿಳಂಬವಾಗಿದೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಹೊಸ ಬೆಳವಣಿಗೆಗಳ ಸುಳಿವು ನೀಡಿದ್ದಾರೆ.
Advertisement
Advertisement
ಒಪ್ಪಂದದ ಪ್ರಕಾರ, ದೆಹಲಿಯಲ್ಲಿ ಎಎಪಿ ನಾಲ್ಕು ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಚುನಾವಣೆ ಎದುರಿಸಲಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್, ಎಎಪಿಗೆ ಎರಡು ಸ್ಥಾನಗಳನ್ನು ನೀಡಿದರೆ, ಹರಿಯಾಣ ಮತ್ತು ಅಸ್ಸಾಂನಲ್ಲಿ ತಲಾ ಒಂದು ಸ್ಥಾನಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆಯಂತೆ. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಜೊತೆ SP ಮೈತ್ರಿ ಖಚಿತ: ಅಖಿಲೇಶ್ ಯಾದವ್
Advertisement
Advertisement
ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷ ಎಸ್‌ಪಿ ಮತ್ತು ಕಾಂಗ್ರೆಸ್ ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಯನ್ನು ಬುಧವಾರ ಅಂತಿಮಗೊಳಿಸಿವೆ. ಸಮಾಜವಾದಿ ಪಕ್ಷ ಮತ್ತು ಇತರ ಮೈತ್ರಿ ಪಕ್ಷಗಳು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್‌ಗೆ 17 ಸೀಟು ಹಂಚಿಕೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 29 ಸ್ಥಾನಗಳಲ್ಲಿ 28 ರಲ್ಲಿ ಸ್ಪರ್ಧಿಸಲಿದೆ. ಎಸ್‌ಪಿ ಒಂದು ಸ್ಥಾನದಲ್ಲಿ ಬಲಪ್ರಯೋಗ ಮಾಡಲಿದೆ ಎಂಬುದಾಗಿ ತಿಳಿದುಬಂದಿದೆ.