ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಏಪ್ರಿಲ್ 2 ರಂದು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಅಂದು ರಾಜ್ಯಾದ್ಯಂತ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುವ ಬೃಹತ್ ಸಮಾವೇಶಗಳಲ್ಲಿಯೂ ಭಾಗಿಯಾಗಲಿದ್ದಾರೆ.
ಏಪ್ರಿಲ್ 2ರಂದು ಬೆಳಗ್ಗೆ 9 ಗಂಟೆಗೆ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್ (BJP JDS Alliance) ಸಮನ್ವಯ ಸಭೆ ನಡೆಯಲಿದೆ. ಬಳಿಕ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಇದನ್ನೂ ಓದಿ: ನಾರಿಶಕ್ತಿ ಅಪಮಾನಗೊಳಿಸುವ ʻಸ್ತ್ರೀ ದ್ವೇಷಿʼಗಳಿರುವುದು ಬೇಸರ – ಶಾಮನೂರು ಶಿವಶಂಕರಪ್ಪ ವಿರುದ್ಧ ಸೈನಾ ನೆಹ್ವಾಲ್ ಕಿಡಿ
Advertisement
Advertisement
ಸಮಾವೇಶದ ಬಳಿಕ ಮಧ್ಯಾಹ್ನ 2 ಗಂಟೆಯಿಂದ 4 ಲೋಕಸಭಾ ಕ್ಷೇತ್ರಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಚನ್ನಪಟ್ಟಣಕ್ಕೆ ತೆರಳಲಿರೋ ಅಮಿತ್ ಶಾ, ಸಂಜೆ 6 ಗಂಟೆಗೆ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ (Dr CN Manjunath) ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಅಲ್ಲಿಯೇ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
Advertisement
Advertisement
ಅಮಿತ್ ಶಾ ಅವರೊಂದಿಗೆ ಮೈತ್ರಿ ಕೂಟದ ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಅಶೋಕ್, ಅಶ್ವಥ್ ನಾರಾಯಣ್ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಜ್ಯೂಸ್ ಜಾಕಿಂಗ್ ಎಂದರೇನು? – ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಚಾರ್ಜಿಂಗ್ ಮಾಡದಂತೆ ಕೇಂದ್ರ ಎಚ್ಚರಿಕೆ ನೀಡಿದ್ದು ಏಕೆ?
ಈಶ್ವರಪ್ಪ ಜೊತೆ ಸಂಧಾನ ಮಾತುಕತೆ ಬಂದ್:
ರಾಜ್ಯಕ್ಕೆ ಬಂದರೂ ಈಶ್ವರಪ್ಪ ಅವರೊಂದಿಗೆ ಸಂಧಾನ ಮಾತುಕತೆ ನಡೆಸದಿರಲು ಅಮಿತ್ ಶಾ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗ ಬಿಟ್ಟು ಉಳಿದ ಭಿನ್ನಮತ ಇರುವ ಕ್ಷೇತ್ರಗಳ ಪ್ರಮುಖರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.