Lok Sabha: ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ಬಿಜೆಪಿ ಟಿಕೆಟ್‌

Public TV
1 Min Read
Bansuri Swaraj

– ನವದೆಹಲಿ ಕ್ಷೇತ್ರದಿಂದ ಬಾನ್ಸುರಿ ಸ್ಪರ್ಧೆ

ನವದೆಹಲಿ: ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ (Sushma Swaraj) ಅವರ ಪುತ್ರಿ ಬಾನ್ಸುರಿ ಸ್ವರಾಜ್ (Bansuri Swaraj) ಮುಂಬರುವ ಲೋಕಸಭಾ ಚುನಾವಣೆಯಲ್ಲಿ (General Elections 2024) ಸ್ಪರ್ಧೆಗೆ ಬಿಜೆಪಿ (BJP) ಟಿಕೆಟ್‌ ನೀಡಿದೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಬಾನ್ಸುರಿ ಸ್ವರಾಜ್ ಅವರು ನವದೆಹಲಿ (New Delhi) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಘೋಷಿಸಿತು. ಇದನ್ನೂ ಓದಿ: BJP First list: 3ನೇ ಬಾರಿಗೆ ವಾರಣಾಸಿಯಿಂದ ಮೋದಿ ಕಣಕ್ಕೆ

sushma swaraj 1

ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಘೋಷಣೆಯಾಗಿದ್ದಕ್ಕೆ ಸಂಸತ ವ್ಯಕ್ತಪಡಿಸಿರುವ ಬಾನ್ಸುರಿ ಸ್ವರಾಜ್‌, ನನ್ನ ತಾಯಿ ಸ್ಥಾಪಿಸಿದ ಪರಂಪರೆಗೆ ತಕ್ಕಂತೆ ಬದುಕಲು ಪ್ರಯತ್ನಿಸುತ್ತೇನೆ. ಅವರು ಸ್ವರ್ಗದಿಂದ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ನನಗೆ ಅಮ್ಮನ ಆಶೀರ್ವಾದವಿದೆ. ಆದರೆ ಈ ಸಾಧನೆಯು ಬಾನ್ಸುರಿ ಸ್ವರಾಜ್ ಅವರದ್ದಲ್ಲ. ದೆಹಲಿ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರದ್ದು ಎಂದು ಬಾನ್ಸುರಿ ಮಾತನಾಡಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

Press meet

ಹೆಸರಾಂತ ವಕೀಲರಾದ ಬಾನ್ಸುರಿ ಸ್ವರಾಜ್ ಅವರು ರಾಜಕೀಯ ಕ್ಷೇತ್ರಕ್ಕೆ ಕಾನೂನು ಪ್ರಕ್ರಿಯೆಗಳಲ್ಲಿ ಅನುಭವದ ಸಂಪತ್ತನ್ನು ತರುತ್ತಾರೆ. ಕಳೆದ ವರ್ಷ ಬಿಜೆಪಿಯು ಅವರನ್ನು ಬಿಜೆಪಿ ದೆಹಲಿಯ ಕಾನೂನು ಘಟಕದ ಸಹ ಸಂಚಾಲಕರನ್ನಾಗಿ ನೇಮಿಸಿತ್ತು.

ಬಾನ್ಸುರಿ ಸ್ವರಾಜ್ ಅವರು ವಕೀಲ ವೃತ್ತಿಯಲ್ಲಿ 15 ವರ್ಷಗಳ ಅನುಭವ ಹೊಂದಿದ್ದಾರೆ. ಅವರು 2007 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ಸೇರಿಕೊಂಡರು. ವಾರ್ವಿಕ್ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿಪೂರ್ವ ಅಧ್ಯಯನ ಪೂರ್ಣಗೊಳಿಸಿದ ನಂತರ, ಅವರು ಪ್ರತಿಷ್ಠಿತ BPP ಕಾನೂನಿ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದರು. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಂಟ್ ಕ್ಯಾಥರೀನ್ ಕಾಲೇಜಿನಲ್ಲಿ ತನ್ನ ಸ್ನಾತಕೋತ್ತರ ಅಧ್ಯಯನ ಪೂರ್ಣಗೊಳಿಸಿದ್ದರು. ಇದನ್ನೂ ಓದಿ: ಲೋಕಸಭೆಗೆ ಬಿಜೆಪಿ ಅಭ್ಯರ್ಥಿಗಳ ಫಸ್ಟ್‌ ಲಿಸ್ಟ್‌ ಔಟ್‌ – ಮಥುರಾದಿಂದ ಹೇಮಾ ಮಾಲಿನಿ ಕಣಕ್ಕೆ

Share This Article