ಮೈಸೂರು: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಾರಾ ಮಹೇಶ್ (Sara Mahesh) ಕಣಕ್ಕೆ ಇಳಿಯುತ್ತಾರೆ ಎಂಬ ಮಾತು ಕಳೆದ ನಾಲ್ಕು ದಿನಗಳಿಂದ ದಟ್ಟವಾಗಿ ಶುರುವಾಗಿತ್ತು. ಈ ಹಬ್ಬಿದ ವೇಗದಲ್ಲೇ ಈ ಮಾತನ್ನು ಖುದ್ದು ಸಾರಾ ಮಹೇಶ್ ಕಡಿಮೆ ಮಾಡುವ ಮಾತಾಡಿದ್ದಾರೆ. ಅಷ್ಟು ಮಾತ್ರವಲ್ಲ ತಮಗೆ ಚುನಾವಣಾ ರಾಜಕೀಯವೇ ಸಾಕಾಗಿದೆ ಎಂಬ ರೀತಿ ವೈರಾಗ್ಯದ ಮಾತನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನು ಲೋಕಸಭಾ ಚುನಾವಣೆಯ (Loksabha Elections 2024) ಆಕಾಂಕ್ಷಿಯಲ್ಲ. ನಾನು ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ. ನನಗೆ ರೆಸ್ಟ್ ಬೇಕಿದೆ. ಹೀಗಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ವಿಧಾನಸಭಾ ಚುನಾವಣೆಯ ಸೋಲು ತಮ್ಮನ್ನು ಮಾನಸಿಕವಾಗಿ ಕುಗ್ಗಿಸಿದೆ ಎಂಬುದನ್ನು ಬಹಿರಂಗವಾಗಿಯೆ ಒಪ್ಪಿಕೊಂಡಿದ್ದಾರೆ.
Advertisement
Advertisement
ಇದೇ ವೇಳೆ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಬೇಕು. ಸಂಸದ ಪ್ರತಾಪ್ ಸಿಂಹ 10 ವರ್ಷ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಮುಖಂಡರು ನನ್ನ ಅಭ್ಯರ್ಥಿಯಾಗುವ ವಿಚಾರದಲ್ಲಿ ಸಂಪರ್ಕಿಸಿದ್ದಾರೆ ಎಂಬುದೆಲ್ಲಾ ಊಹಾಪೋಹ ಎನ್ನುವ ಮೂಲಕ ಪ್ರತಾಪ್ ಸಿಂಹ ಪರವೂ ಬ್ಯಾಟ್ ಬೀಸಿದ್ದಾರೆ.
Advertisement
ಸದ್ಯಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರದಲ್ಲಿ ಊಹಾಪೋಹಗಳದ್ದೇ ಕಾರುಬಾರು. ಆದ್ರೆ ಸಾರಾ ಮಹೇಶ್ ಬ್ರೇಕ್ ಹಾಕಿ ಗಾಸಿಪ್‍ಗಳು ಹುಟ್ಟುವುದನ್ನು ಕಡಮೆ ಮಾಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ – ಬಿಜೆಪಿ ನಾಯಕರ ವಿರುದ್ಧ ನಲಪಾಡ್ ದೂರು