ಬೆಂಗಳೂರು: ರಾಜ್ಯದಲ್ಲಿ ಮೊದಲನೇ ಹಂತದ ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ (General Elections 2024) ಮತದಾನಕ್ಕೆ ಕ್ಷಣಗಣನೆ ಆಂಭವಾಗಿದ್ದು, ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ರಾಜ್ಯಾದ್ಯಂತ 26 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನದಂದು ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರಿಲ್ 24 ರಂದು ಸಂಜೆ 5:00 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇಧಿಸಲಾಗಿದೆ. ಇನ್ನೂ ಇಂದು ಸಂಜೆ 5 ಗಂಟೆಯಿಂದ ಈ ಕ್ರಮ ಜಾರಿಗೆ ಬರಲಿದೆ.
ಬೆಂಗಳೂರು ನಹರ ಮತ್ತು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ (Alcohol) ಮಾರಾಟ ಡಿಪೋಗಳನ್ನು, ಮದ್ಯ, ಬಿಯರ್, ವೈನ್ ತಯಾರಿಕಾ ಡಿಸ್ಟಿಲರಿ, ಬ್ರಿವರಿ, ವೈನರಿಗಳನ್ನು, ಸ್ಟಾರ್ ಹೋಟೆಲ್‍ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶದಂತೆ ಪಾಲನೆ ಮಾಡುವುದಾಗಿ ಬಾರ್ ಗಳ ಮುಂದೆ ನಾಮಫಲಕ ಹಾಕಿ ಅಧಿಕಾರಿಗಳ ಆದೇಶ ಪಾಲನೆ ಮಾಡಲಾಗಿದೆ. ಒಟ್ಟಾರೆ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು, ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಇಂದು ಸಂಜೆ 5 ಗಂಟೆಯಿಂದ ಜಾರಿಗೆ ಬರಲಿದೆ. ಇದನ್ನೂ ಓದಿ: ಕೈ ಅಭ್ಯರ್ಥಿ ಡಿ.ಕೆ ಸುರೇಶ್ ಆಪ್ತರಿಗೆ ಐಟಿ ಶಾಕ್