ನವದೆಹಲಿ: ಲೋಕಸಭಾ ಚುನಾವಣಾ (Lok Sabha Election) ದಿನಾಂಕ ಪ್ರಕಟವಾಗಿದ್ದು ದೇಶದಲ್ಲಿ (India) ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19 ರಿಂದ ಮೊದಲ ಹಂತದ ಚುನಾವಣೆ ನಡೆಯಲಿದ್ದು ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
2024ರ ಲೋಕಸಭಾ ಮತ್ತು ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ ವಿಧಾನಸಭಾ ಚುನಾವಣೆ (Vidhan Sabha Election) ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ರಾಜೀವ್ ಕುಮಾರ್ (Rajiv Kumar) ಅವರು ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
Advertisement
Advertisement
Advertisement
ಒಟ್ಟು 97 ಕೋಟಿ ಮತದಾರರಿದ್ದು, 10.5 ಲಕ್ಷ ಮತದಾನ ಕೇಂದ್ರಗಳನ್ನು ತೆರೆಯಲಾಗುತ್ತದೆ. 49.9 ಕೋಟಿ ಪುರುಷ, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48,000 ತೃತಿಯ ಲಿಂಗಿಗಳಿದ್ದಾರೆ. 19.74 ಕೋಟಿ ಯುವ ಮತದಾರರಿದ್ದರೆ 1.8 ಕೋಟಿ ಮೊದಲ ಸಲ ಮತದಾನ ಮಾಡುವ ಯುವ ಮತದಾರರಿದ್ದಾರೆ.
Advertisement
ಪ್ರಸ್ತುತ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮೊದಲು ಹೊಸ ಸರ್ಕಾರ ರಚನೆಯಾಗಬೇಕಿದೆ.
ಕಳೆದ ಬಾರಿ ಮಾರ್ಚ್ 10ರಂದು ಚುನಾವಣಾ ದಿನಾಂಕ ಘೋಷಿಸಲಾಗಿತ್ತು. ಏಪ್ರಿಲ್ 11ರಿಂದ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಮೇ 23 ರಂದು ಮತ ಎಣಿಕೆ ನಡೆದಿತ್ತು.
ಫೆಬ್ರುವರಿ 14ರಂದು ಅನೂಪ್ ಚಂದ್ರ ಪಾಂಡೆ ನಿವೃತ್ತಿ ಮತ್ತು ಮಾರ್ಚ್ 8ರಂದು ಅರುಣ್ ಗೋಯಲ್ ಅವರು ಹಠಾತ್ ರಾಜೀನಾಮೆ ನೀಡಿದ ನಂತರ ಚುನಾವಣಾ ಆಯೋಗದಲ್ಲಿ ಎರಡು ಆಯುಕ್ತರ ಹುದ್ದೆಗಳು ಖಾಲಿಯಾಗಿತ್ತು. ಪ್ರಧಾನಿ ನೇತೃತ್ವದ ಸಮಿತಿ ಜ್ಞಾನೇಶ್ ಕುಮಾರ್ ಮತ್ತು ಸುಖ್‌ಬೀರ್ ಸಿಂಗ್ ಸಂಧು ಅವರನ್ನು ಆಯುಕ್ತರನ್ನಾಗಿ ನೇಮಿಸಿದ್ದು ಶುಕ್ರವಾರ ಅವರು ಅಧಿಕಾರ ಸ್ವೀಕರಿಸಿದ್ದರು.