ಚೆನ್ನೈ: 2019 ಲೋಕಸಮರ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಈಗ ತನ್ನ ಎನ್‍ಡಿಎ ಮಿತ್ರಕೂಟವನ್ನು ವಿಸ್ತರಣೆಗೆ ವೇಗ ನೀಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಖಚಿತ ಪಡಿಸಿದ ಬೆನ್ನಲ್ಲೇ ಈಗ ದಕ್ಷಿಣದಲ್ಲೂ ಕ್ಷೇತ್ರ ಹಂಚಿಕೆ ಸೂತ್ರ ಜಾರಿಗೊಳಿಸಿದೆ. ಇದರ ಭಾಗವಾಗಿ ತಮಿಳುನಾಡಿನಲ್ಲಿ ಆಡಳಿತರೂಢ ಅಣ್ಣಾಡಿಎಂಕೆ ಜೊತೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ.
Tamil Nadu: Union Minister and senior BJP leader Piyush Goyal arrives at the residence of DMDK chief Vijayakanth in Chennai. pic.twitter.com/zH9bLDDafE
— ANI (@ANI) February 19, 2019
Advertisement
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎರಡು ಪಕ್ಷ ನಾಯಕರು ಮೈತ್ರಿಯಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳಲಿದೆ. ತಮಿಳುನಾಡಿನಲ್ಲಿ ಓ. ಪನ್ನೀರ್ ಸೆಲ್ವಂ ಹಾಗೂ ಪಳನಿಸ್ವಾಮಿ ನಾಯಕತ್ವಕ್ಕೆ ನಾವು ಬೆಂಬಲ ನೀಡಲಿದ್ದೆವೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವಕ್ಕೆ ಎಐಎಡಿಎಂಕೆ ಬೆಂಬಲಿಸಲಿದೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ತಿಳಿಸಿದರು.
Advertisement
ಮೈತ್ರಿಯ ಅನ್ವಯ 39 ಕ್ಷೇತ್ರಗಳಲ್ಲಿ ಎಐಎಡಿಎಂಕೆ ಪಕ್ಷ 25, ಬಿಜೆಪಿ 5 ಹಾಗೂ ಪಿಎಂಕೆ 7 ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾಡಿಕೊಂಡಿವೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಸುದ್ದಿಗೋಷ್ಠಿಯಲ್ಲಿ ತಮಿಳುನಾಡು ಸಿಎಂ ಪಳನಿಸ್ವಾಮಿ, ಉಪಮುಖ್ಯಮಂತ್ರಿ ಓ. ಪನ್ನೀರಸೆಲ್ವಂ ಹಾಗೂ ಕೇಂದ್ರ ಸಚಿವ ಪಿಯೂಶ್ ಗೋಯಲ್ ಭಾಗಿಯಾಗಿದ್ದರು.
Advertisement
Tamil Nadu Deputy CM O Panneerselvam: AIADMK and BJP will have an alliance for Lok Sabha elections which will be a mega and winning alliance pic.twitter.com/WeEADmnzR6
— ANI (@ANI) February 19, 2019
Advertisement
ಅಂದಹಾಗೇ ತಮಿಳುನಾಡಿನಲ್ಲಿ ಪುದುಚೇರಿ ಸೇರಿದಂತೆ 40 ಲೋಕಸಭೆ ಕ್ಷೇತ್ರಗಳಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಎರಡೂ ಪಕ್ಷಗಳ ನಡುವೆ ಮೈತ್ರಿ ಏರ್ಪಾಡಾಗಿದೆ. 2014 ಲೋಕಸಭಾ ಚುನಾವಣೆಯಲ್ಲಿ ಎಡಿಎಂಕೆ 37 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ 1 ಹಾಗೂ ಪಿಎಂಕೆ ಪಕ್ಷ 1 ಸ್ಥಾನ ಪಡೆದಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv