ನವದೆಹಲಿ: ಲೋಕಸಭಾ ಚುನಾವಣೆಗೆ (Loksabha Election) ತಯಾರಿಗಳು ಭರದಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯವಾರು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಬಿಜೆಪಿ ಹೈಕಮಾಂಡ್ ರಾಜ್ಯಾವಾರು ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಉಸ್ತುವಾರಿಯಾಗಿ ಸಂಸದ ಡಾ.ರಾಧ ಮೋಹನ್ ದಾಸ್ ಅಗ್ರವಾಲ್ (Radha Mohan Das Agarwal) ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ (Sudhakar Reddy) ಅವರನ್ನ ನೇಮಕ ಮಾಡಿದೆ.
भारतीय जनता पार्टी के राष्ट्रीय अध्यक्ष श्री @JPNadda ने आगामी लोकसभा चुनाव के लिए निम्नलिखित राज्यों में प्रदेश चुनाव प्रभारी एवं सह-चुनाव प्रभारी की नियुक्ति की है। pic.twitter.com/1hpPH4cNsa
— BJP (@BJP4India) January 27, 2024
ಕೇರಳಕ್ಕೆ ಪ್ರಕಾಶ್ ಜಾವ್ಡೇಕರ್, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ, ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ. ಇದನ್ನೂ ಓದಿ: I.N.D.I.A ಒಕ್ಕೂಟದಿಂದ ಜೆಡಿಯು ಔಟ್?- ಬಿಜೆಪಿ ಜೊತೆ ಸರ್ಕಾರ ರಚನೆ ಬಹುತೇಕ ಫಿಕ್ಸ್
ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಉಸ್ತುವಾರಿಯಾಗಿ ತರುಣ್ ಚುಗ್ ಹಾಗೂ ಆಶಿಶ್ ಸೂದ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗೆ ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.