ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿದ್ದ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿ (Kaustav Bagchi) ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಒಂದು ದಿನದ ಹಿಂದೆ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿ ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡರು. ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ್ದರು. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರ ಬಿಡುಗಡೆ – ಆಯ್ಕೆಗೆ ಮೋದಿ, ಅಮಿತ್ ಶಾ ತಂತ್ರವೇನು?
Advertisement
Congress leader Kaustav Bagchi joined BJP in the presence of West Bengal LoP and BJP leader Suvendu Adhikari and West Bengal BJP chief Sukant Majumdar at the BJP party office in Salt Lake Kolkata. pic.twitter.com/mlfD6KQOpq
— ANI (@ANI) February 29, 2024
Advertisement
ಬಿಜೆಪಿಗೆ ಕೌಸ್ತವ್ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಕೂಡ ಉಪಸ್ಥಿತರಿದ್ದರು.
Advertisement
ಪಕ್ಷದ ಇತರರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಬಾಗ್ಚಿ ಬುಧವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ಪಾಕಿಸ್ತಾನ ಮತ್ತು ಕಾಂಗ್ರೆಸ್ ಸ್ಥಿತಿ ಒಂದೇ ರೀತಿಯಾಗಿದೆ: ಜೋಶಿ
Advertisement
ಕಳೆದ ವರ್ಷ (2023) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಮಾತನಾಡಿದ್ದಕ್ಕೆ ಬಾಗ್ಚಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.