ಬಾಲಿವುಡ್ ನಟಿ ಹೇಮಾ ಮಾಲಿನಿ (Hema Malini) 2024ರ ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ 2ನೇ ಬಾರಿ ಲೋಕಸಭೆ ಚುನಾವಣೆಗೆ (Loksabha Elections 2024) ನಿಲ್ಲುವ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿದ ಆಸ್ತಿ ವಿವರದಲ್ಲಿ ಒಟ್ಟು 142 ಕೋಟಿ ರೂಪಾಯಿಯನ್ನು ಘೋಷಿಸಿದ್ದಾರೆ.
ಹೇಮಾ ಮಾಲಿನಿ ಪತಿ ನಟ ಧರ್ಮೇಂದ್ರ ಅವರ ಆಸ್ತಿ ಒಟ್ಟು 26,52,32,266 ರೂ ಆಸ್ತಿ ಹೊಂದಿದ್ದಾರೆ. ಹೇಮಾ ಮಾಲಿನಿ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಹೇಮಾ ಮಾಲಿನಿ ಕೈಯಲ್ಲಿ 13,52,865 ರೂಪಾಯಿ ನಗದು ಇದೆ. ಬ್ಯಾಂಕ್ ಖಾತೆಯಲ್ಲಿ 99,93,177 ರೂಪಾಯಿಯನ್ನು ಇಟ್ಟಿದ್ದಾರೆ.
1999ರಲ್ಲಿ ವಿನೋದ್ ಖನ್ನಾ ಪರವಾಗಿ ಹೇಮಾ ಮಾಲಿನಿ ಪ್ರಚಾರ ಮಾಡಿದ್ದರು. 2004ರಲ್ಲಿ ಅಫಿಷಿಯಲ್ ಆಗಿ ಬಿಜೆಪಿಗೆ ಸೇರ್ಪಡೆಯಾದರು. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಂತ್ ಚೌಧರಿ ಅವರನ್ನು ಸೋಲಿಸಿ ಹೇಮಾ ಮಾಲಿನಿ ಮಥುರಾದಲ್ಲಿ ಗೆದ್ದು ಬೀಗಿದ್ದರು. ಇದೀಗ 2ನೇ ಬಾರಿಯು ಮಥುರಾದಿಂದಲೇ ನಟಿ ಲೋಕಸಭಾ ಎಲೆಕ್ಷನ್‌ಗೆ ನಿಂತಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದು, ಮಥುರಾ ಅಭ್ಯರ್ಥಿಯಾಗಿ ಹೇಮಾ ಮಾಲಿನಿ ಹೆಸರನ್ನು ಘೋಷಿಸಿದೆ.
ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿ ಸಜ್ಜಾಗಿದ್ದು, ಈ ಬಾರಿ ಹೇಮಾ ಮಾಲಿನಿ ಕೂಡ ಸಾಥ್ ನೀಡುತ್ತಿದ್ದಾರೆ. ಜೊತೆಗೆ ನಾನಾ ಭಾಗಗಳಲ್ಲಿ ಸಿನಿಮಾ ನಟ ನಟಿಯರಿಗೆ ನಾನಾ ಪಕ್ಷಗಳು ಟಿಕೆಟ್ ಘೋಷಣೆ ಮಾಡಿವೆ.