ಬಾಗಲಕೋಟೆ: ಚುನಾವಣಾ (Lok Sabha Elections 2024) ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಮುಧೋಳದಲ್ಲಿ ನಡೆದಿದೆ.
ಮೃತ ಸಿಬ್ಬಂದಿಯನ್ನು ಗೋವಿಂದಪ್ಪ ಎಂದು ಗುರುತಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ನಿಲ್ದಾಣದ ಗೇಟ್ ಬಳಿ ಬಂದಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. ಈ ವೇಳೆ ಅವರು ಸ್ಥಳದಲ್ಲೇ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಭೇಟಿ ಕೊಟ್ಟ ಬಳಿಕ ನನ್ನನ್ನು ಟಾರ್ಗೆಟ್ ಮಾಡಲಾಗಿದೆ: ʼಕೈʼ ವಿರುದ್ಧ ರಾಧಿಕಾ ಕಿಡಿ
ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಗೋವಿಂದಪ್ಪ ಅವರು ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಮುಧೋಳದ ಬಿದರಿ ಶಾಲೆಯಲ್ಲಿ ಶಿಕ್ಷಕರಾಗಿ (Teacher) ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ನನಗೆ ಕೆಆರ್ ನಗರದ ಸಂತ್ರಸ್ತೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್