ಹುಬ್ಬಳ್ಳಿ: ಧಾರವಾಡ ಲೋಕಸಭಾ (Dharawad Lok Sabha Constituency) ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ (Prhlad Joshi) 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ ವೇಳೆ ರೋಡ್ ಶೋದಲ್ಲಿ (Road Show) ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: ಭಾರತದ 2 ಲಕ್ಷಕ್ಕೂ ಹೆಚ್ಚು ಎಕ್ಸ್ ಖಾತೆಗಳ ನಿಷೇಧ
ಧಾರವಾಡ ಕ್ಷೇತ್ರದಲ್ಲಿ ಸತತ 5ನೇ ಬಾರಿ ಕಣಕ್ಕಿಳಿದ ಪ್ರಹ್ಲಾದ್ ಜೋಶಿ ಅವರು 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಶತಸಿದ್ಧ. ಇದರಲ್ಲಿ ಅನುಮಾನವೇ ಇಲ್ಲವೆಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ 5ನೇ ಬಾರಿ ಸ್ಪರ್ಧಿಸಿರುವ ಜೋಶಿ ಅವರು ಕಳೆದ ನಾಲ್ಕು ಅವಧಿಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅತ್ಯಂತ ಪರಿಶ್ರಮಿ ನಾಯಕ ಎಂದು ಬಿಎಸ್‌ವೈ ಬಣ್ಣಿಸಿದರು. ಇದನ್ನೂ ಓದಿ: ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಕ್ಷೇತ್ರದಾದ್ಯಂತ ಅದ್ಭುತ ಅಭಿವೃದ್ಧಿ ಕಾರ್ಯಗಳನ್ನು ಪ್ರಹ್ಲಾದ ಜೋಶಿ ಮಾಡಿದ್ದಾರೆ. ರೈಲ್ವೆ ಮಾರ್ಗ, ನಿಲ್ದಾಣ ಹೀಗೆ ಅನೇಕ ಮಾದರಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.
ಈಗ 5ನೇ ಬಾರಿಯೂ ಕ್ಷೇತ್ರದ ಅಭಿವೃದ್ಧಿಗಾಗಿ ಜನ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಲೀಡ್ ಕೊಟ್ಟು ಜೋಶಿ ಅವರನ್ನು ಗೆಲ್ಲಿಸಿಕೊಳ್ಳುತ್ತಾರೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.