ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು (Rahul Gandhi) ಸ್ಪೀಕರ್ ಓಂ ಬಿರ್ಲಾ (OM Birla) ಅವರಿಗೆ ಪತ್ರ ಬರೆದಿದ್ದಾರೆ. 2024 ಜುಲೈ 1 ರಂದು ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಟೀಕೆಗಳ ಸಂಬಂಧ ರಾಗಾ ಅವರು ಈ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ..?: 2024 ಜುಲೈ 1 ರಂದು ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದೆ. ಈ ಚರ್ಚೆಯ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಟೀಕೆಗಳ ಸಂಬಂಧವೇ ನಾನು ಈ ಪತ್ರ ಬರೆಯುತ್ತಿದ್ದೇನೆ ಎಂದಿದ್ದಾರೆ.
Advertisement
Advertisement
ಸದನದ ನಡಾವಳಿಗಳಿಂದ ಕೆಲವು ಟೀಕೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವ ಅಧಿಕಾರ ಅಧ್ಯಕ್ಷರಿಗೆ ಮಾತ್ರ ಇರುವಂತದ್ದು. ಇವುಗಳ ಸ್ವರೂಪವನ್ನು ಲೋಕಸಭೆಯಲ್ಲಿನ ಕಾರ್ಯವಿಧಾನ ಮತ್ತು ನಡವಳಿಕೆ, ನಿಯಮ 380 ರಲ್ಲಿ ನಿರ್ದಿಷ್ಟಪಡಿಸಲಾಗಿದೆ. ನನ್ನ ಭಾಷಣದ ಗಣನೀಯ ಹಾಗೂ ಮುಖ್ಯ ಭಾಗವನ್ನ ತೆಗೆದುಹಾಕಿರುವುದನ್ನ ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದರು.
Advertisement
Advertisement
ನಾನು ಸದನದಲ್ಲಿ ಜನರಿಗೆ ತಿಳಿಸಲು ಬಯಸಿದ್ದು, ನೆಲದ ವಾಸ್ತವತೆ ಹಾಗೂ ವಾಸ್ತವಿಕ ನಿಲುವು. ಭಾರತದ ಸಂವಿಧಾನದ 105(1)ನೇ ಪರಿಚ್ಛೇದದಲ್ಲಿ ಪ್ರತಿಪಾದಿಸಿರುವಂತೆ ಜನರ ಸಾಮೂಹಿಕ ಧ್ವನಿಯನ್ನು ವ್ಯಕ್ತಪಡಿಸುವುದು ಸದನದ ಪ್ರತಿಯೊಬ್ಬ ಸದಸ್ಯರ ವಾಕ್ ಸ್ವಾತಂತ್ರ್ಯ. ಈ ಸ್ವಾತಂತ್ರ್ಯವನ್ನು ಎಲ್ಲಾ ಜನಪ್ರತಿನಿಧಿಗಳು ಹೊಂದಿದ್ದಾರೆ. ಸದನದಲ್ಲಿ ಜನರ ಸಮಸ್ಯೆಗಳನ್ನ ಪ್ರತಿಪಾದಿಸುವುದು ಪ್ರತಿಯೊಬ್ಬ ಸದಸ್ಯರ ಹಕ್ಕು. ಆ ಹಕ್ಕನ್ನು ನಾನು ನಿನ್ನೆ ಚಲಾಯಿಸಿದ್ದೇನೆ ಎಂದು ತಿಳಿಸಿದ್ದಾರೆ.
ನನ್ನ ಹೇಳಿಕೆಗಳನ್ನು ತೆಗೆದುಹಾಕುವುದು ಸಂಸದೀಯ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ. ಈ ಸಂದರ್ಭದಲ್ಲಿ ನಾನು ಅನುರಾಗ್ ಠಾಕೂರ್ ಅವರ ಭಾಷಣದ ಬಗ್ಗೆ ಉಲ್ಲೇಖ ಮಾಡಲು ಬಯಸುತ್ತೇನೆ. ಅನುರಾಗ್ ರ ಭಾಷಣ, ಕೇವಲ ಆರೋಪಗಳಿಂದ ತುಂಬಿತ್ತು ಎಂದು ಪತ್ರದ ಮೂಲಕ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದರು.