ಶಿವಮೊಗ್ಗ: ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಹರ್ಷ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಕುಟುಂಬಕ್ಕೆ ಬಿಜೆಪಿ ಯುವ ಮೋರ್ಚಾದ ವತಿಯಿಂದ 5 ಲಕ್ಷ ರೂ. ಚೆಕ್ ನೀಡಿದ್ದಾರೆ.
ಹರ್ಷ ಮನೆಗೆ ಭೇಟಿ ನೀಡಿದ ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಯುವ ಘಟಕ ರಾಜ್ಯದ ತಂಡದವರೆಲ್ಲರು ಅವರ ಮನೆಗೆ ಭೇಟಿ ನೀಡಿದ್ದೇವೆ. ಹರ್ಷ ಹಿಂದುತ್ವಕ್ಕಾಗಿ ಬದುಕಿದ ಹುಡುಗನಾಗಿದ್ದನು. ಅವರನ್ನು ಅತ್ಯಂತ ಅಮಾನುಷವಾಗಿ ಬರ್ಬರವಾಗಿ ಕೊಲ್ಲಲಾಗಿದೆ. ದೇಶಕ್ಕಾಗಿ ಹೇಗೆ ಯೋಧರು ಹುತ್ಮಾತ್ಮರಾಗುತ್ತಾರೋ ಹಾಗೇ ನನ್ನ ಮಗ ಹುತಾತ್ಮ ನಾಗಿದ್ದಾನೆ ಅಂತ ಅವರ ತಾಯಿ ಹೇಳಿದರು ಎಂದರು. ಇದನ್ನೂ ಓದಿ: ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು
ಪ್ರತಿ ಮನೆಯಲ್ಲಿಯೂ ಹರ್ಷ ನಂತ ಹಿಂದೂ ಹುಟ್ಟಬೇಕು ಅಂದಿದ್ದಾರೆ. ಫೇಸ್ ಬುಕ್ ಪೋಸ್ಟ್ ಮಾಡಿದ್ದಾಗ ಈ ರೀತಿ ಆಗುತ್ತದೆ ಅಂದರೆ ಐಸಿಸಿಗೂ ನಮಗೂ ಏನೂ ವ್ಯತ್ಯಾಸ ಇದೆ? ಹತ್ಯೆ ಮಾಡಿದ ರಾಕ್ಷಕರಿಗೆ ಒಂದು ಮಾತು ಹೇಳುತ್ತೇನೆ. ರಾಜ್ಯದಲ್ಲಿ ಹಿಂದೂತ್ವದ ಸರ್ಕಾರ ಇದ್ದು, ನಿಮ್ಮನ್ನು ಹುಡುಕಿ ಗಲ್ಲಿಗೇರಿಸಬೇಕು ಎಂದು ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರದ ಮನವಿ ಮಾಡಿಕೊಳ್ಳುತ್ತೇನೆ. ಹಿಂದೂ ಹರ್ಷನ ಹತ್ಯೆ ಮರ್ಡರ್ ಅಲ್ಲ, ಭಯೋತ್ಪಾದಕ ಕೃತ್ಯ ಅಂತಾನೇ ಪ್ರಕರಣ ದಾಖಲಾಗಬೇಕು ಎಂದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್
ಈಗಾಗಲೇ ನಾಲ್ಕು ಜನ ಸುಪಾರಿ ಕಿಲ್ಲರ್‍ಗಳನ್ನು ಅರೆಸ್ಟ್ ಮಾಡಲಾಗಿದೆ. ರಾಜ್ಯದಲ್ಲಿ ಕೋಕಾ ಕಾಯ್ದೆ ಜಾರಿಗೊಳಿಸಬೇಕು. ಎಸ್‍ಡಿಪಿಐ, ಪಿಎಫ್‍ಐ, ಸಿಎಫ್‍ಐ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳನ್ನು ಬ್ಯಾನ್ ಮಾಡಬೇಕು. ಇವುಗಳನ್ನೂ ಬ್ಯಾನ್ ಮಾಡಲು ಕೇಂದ್ರ ಸರ್ಕಾರಕ್ಕೆ ದಾಖಲೆ ಸಮೇತ ಕರುಡು ಸಲ್ಲಿಕೆ ಮಾಡಬೇಕು. ಹಿಂದೂಗಳ ಹತ್ಯೆ ಕೇವಲ ಮರ್ಡರ್ ಅಲ್ಲ. ಅದೊಂದು ವ್ಯವಸ್ಥಿತ ಮರ್ಡರ್‍ಗಳ ಷಡ್ಯಂತ್ರ ಎಂದರು.