ನವದೆಹಲಿ: ನಿವೃತ್ತ ವಾಯುಸೇನೆ ಮುಖ್ಯಸ್ಥ (Air Chief Marshal) ಆರ್‌ಕೆಎಸ್ ಭದೌರಿಯಾ (R K S Bhadauria) ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಬಿಜೆಪಿ (BJP) ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಭದೌರಿಯಾ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
Advertisement
ರಫೇಲ್ ಫೈಟರ್ ಜೆಟ್ (Rafale Fighter Jet) ಅನ್ನು ಹಾರಿಸಿದ ಮೊದಲ ಭಾರತೀಯ ವಾಯುಪಡೆಯ ಅಧಿಕಾರಿಗಳಲ್ಲಿ ಭದೌರಿಯಾ ಕೂಡ ಒಬ್ಬರು ಮತ್ತು ಈ ವಿಮಾನ ಖರೀದಿಗೆ ಫ್ರಾನ್ಸ್‌ನೊಂದಿಗೆ (France) ಒಪ್ಪಂದವನ್ನು ಅಂತಿಮಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು.
Advertisement
ಭದೌರಿಯಾ ಅವರು ಸೆಪ್ಟೆಂಬರ್ 2019 ರಿಂದ ಸೆಪ್ಟೆಂಬರ್ 2021 ರವರೆಗೆ ವಾಯುಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ತವರು ಜಿಲ್ಲೆಯನ್ನು ಗೆಲ್ಲಲು ನೇರವಾಗಿ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ
Advertisement
Advertisement
ಭದೌರಿಯಾ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ವಾಯು ಸೇನಾ ಪದಕ, ರಾಷ್ಟ್ರಪತಿಗಳ ಪದಕ ಪಡೆದ ಇರವು ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. ಇವರು 4250 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದು, 26 ವಿವಿಧ ರೀತಿಯ ಫೈಟರ್ ವಿಮಾನಗಳನ್ನು ಹಾರಿಸಿದ್ದಾರೆ.
ಉತ್ತರ ಪ್ರದೇಶ (Uttar Pradesh) ಮೂಲದ ಭದೌರಿಯಾ ಆ ರಾಜ್ಯದಿಂದಲೇ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿಲ್ಲ. ಮೂಲಗಳ ಪ್ರಕಾರ ಹಾಲಿ ವಿಕೆ ಸಿಂಗ್ ಪ್ರತಿನಿಧಿಸುತ್ತಿರುವ ಗಾಜಿಯಾಬಾದ್‌ನಿಂದ ಭದೌರಿಯಾ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಮರಳಿ ಗೂಡಿಗೆ ಜನಾರ್ದನ ರೆಡ್ಡಿ- ಸೋಮವಾರ ಬಿಜೆಪಿ ಸೇರ್ಪಡೆ
ಬಿಜೆಪಿಗೆ ಸೇರ್ಪಡೆಯಾಗಿ ಮಾತನಾಡಿದ ಅವರು, ಮತ್ತೊಮ್ಮೆ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ನನಗೆ ಈ ಅವಕಾಶ ನೀಡಿದ ಪಕ್ಷದ ನಾಯಕತ್ವಕ್ಕೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಐಎಎಫ್‌ಗೆ ಸೇವೆ ಸಲ್ಲಿಸಿದ್ದೇನೆ. ಆದರೆ ಬಿಜೆಪಿ ಸರ್ಕಾರದ ನಾಯಕತ್ವದಲ್ಲಿ ಕಳೆದ 8 ವರ್ಷಗಳು ನನ್ನ ಸೇವೆಯ ಅತ್ಯುತ್ತಮ ಸಮಯವಾಗಿತ್ತು. ನಮ್ಮ ಸಶಸ್ತ್ರ ಪಡೆಗಳನ್ನು ಸಶಕ್ತಗೊಳಿಸಲು ಮತ್ತು ಆಧುನೀಕರಿಸಿ ಸ್ವಾವಲಂಬಿಗಳನ್ನಾಗಿ ಮಾಡಲು ಈ ಸರ್ಕಾರವು ತೆಗೆದುಕೊಂಡ ಕಠಿಣ ಕ್ರಮಗಳು ಪಡೆಗಳಲ್ಲಿ ಹೊಸ ಸಾಮರ್ಥ್ಯವನ್ನು ಹುಟ್ಟುಹಾಕಿದೆ. ಮಾತ್ರವಲ್ಲದೆ ಅವರಿಗೆ ಹೊಸ ಆತ್ಮವಿಶ್ವಾಸವನ್ನೂ ತುಂಬಿದೆ. ಸರ್ಕಾರದ ಸ್ವಾವಲಂಬಿ ನಿರ್ಧಾರ ಫಲಿತಾಂಶಗಳನ್ನು ನಾವು ಈಗ ನೋಡುತ್ತಿದ್ದೇವೆ. ಭದ್ರತೆಯ ದೃಷ್ಟಿಯಿಂದ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ಬಹಳ ಮುಖ್ಯವಾಗಿದ್ದು, ಜಾಗತಿಕವಾಗಿ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದೆ ಎಂದು ಅವರು ಹೇಳಿದರು.