Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ 3 ಮತ ಎಣಿಕೆ ಕೇಂದ್ರಗಳ ಸಿದ್ಧತೆ ಪರಿಶೀಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ 3 ಮತ ಎಣಿಕೆ ಕೇಂದ್ರಗಳ ಸಿದ್ಧತೆ ಪರಿಶೀಲನೆ

Bengaluru City

ಬೆಂಗಳೂರಿನ 3 ಮತ ಎಣಿಕೆ ಕೇಂದ್ರಗಳ ಸಿದ್ಧತೆ ಪರಿಶೀಲನೆ

Public TV
Last updated: June 2, 2024 1:46 pm
Public TV
Share
3 Min Read
counting centers bengaluru
SHARE

– ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮತ ಎಣಿಕೆ ಕೇಂದ್ರಗಳ ಸಿದ್ಧತೆಗಳ ಪರಿಶೀಲನೆ

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Elections 2024) ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ತಿಳಿಸಿದರು.

ಲೋಕಸಭಾ ಚುನಾವಣೆಯ ಸಂಬಂಧ ಮತ ಎಣಿಕೆ ಕೇಂದ್ರಗಳಿಗೆ (Counting Centers) ಭೇಟಿ ನೀಡಿ ತಪಾಸಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ನಗರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ 3 ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬರಲಿದೆ ಎಂದು ಹೇಳಿದರು. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

counting centers bengaluru 1

ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿದ್ದು, ಪ್ರತಿ ಟೇಬಲ್‌ಗೆ ಮೈಕ್ರೋ ಅಬ್ಸರ್ವರ್‌, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ. ಮತ ಎಣಿಕೆ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಮತ ಎಣಿಕೆ ಏಜೆಂಟ್‌ಗಳನ್ನು ಬೆಳಗ್ಗೆ 6 ಗಂಟೆಗೆ ಬರಲು ತಿಳಿಸಲಾಗಿದೆ. ಯಾರಿಗೆ ಗುರುತಿನ ಚೀಟಿ ನೀಡಲಾಗಿದೆ ಅಂತಹವರಿಗೆ ಮಾತ್ರ ಮತ ಎಣಿಕೆ ಕೇಂದ್ರದ ಒಳಗೆ ಪ್ರವೇಶವಿರಲಿದೆ. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳನ್ನು ಹಾಕಲು ಅವಕಾಶವಿದ್ದು, ದೊಡ್ಡ ಕೊಠಡಿಗಳಿದ್ದರೆ ಹೆಚ್ಚಿನ ಟೇಬಲ್‌ಗಳನ್ನು ಹಾಕಲಾಗುತ್ತದೆ ಎಂದರು.

ಅಂಚೆ ಮತದಾನವು ಈ ಬಾರಿ ಹೆಚ್ಚಾಗಿ ನಡೆದಿರುವುದರಿಂದ ಎಣಿಕೆಯು ನಿರಂತರವಾಗಿ ನಡೆಯುತ್ತಿರುತ್ತದೆ. ಕೊನೆಯ ರೌಂಡ್‌ನ ಮುಂಚಿತವಾಗಿ ಅಂಚೆ ಮತದಾನದ ಎಣಿಕೆಯನ್ನು ಮುಗಿಸಲಾಗುತ್ತದೆ. ಈ ಬಾರಿ ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಅದರ ಜೊತೆಗೆ ಚುನಾವಣಾಧಿಕಾರಿ ನಿರ್ದೇಶನದ ಮೇರೆಗೆ ಇನ್ನಿತರ ಕಡೆ ಸಿಸಿ ಕ್ಯಾಮೆರಾ ಹಾಗೂ ವೀಡಿಯೋಗ್ರಾಫಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರದಲ್ಲಿ ಸಚಿವ ಸ್ಥಾನದ ಬಗ್ಗೆ ಯಾವುದೇ ನಿರೀಕ್ಷೆಯಿಲ್ಲ: ಯದುವೀರ್ ಒಡೆಯರ್

ಮತ ಎಣಿಕೆ ಕೇಂದ್ರದಲ್ಲಿ ವೀಕ್ಷಕರಿಗಾಗಿ ಒಂದು ಕೊಠಡಿ, ಚುನಾವಣಾಧಿಕಾರಿಗಾಗಿ ಒಂದು ಕೊಠಡಿ ಹಾಗೂ ಮಾಧ್ಯಮದವರಿಗಾಗಿ ಮಾಧ್ಯಮ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ಮಾಧ್ಯಮದವರಿಗೆ ಮಾಧ್ಯಮ ಕೇಂದ್ರದಲ್ಲಿ ಮಾತ್ರ ಮೊಬೈಲ್ ಬಳಸಲು ಅವಕಾಶವಿರುತ್ತದೆ. ಹೊರಗಡೆ ಮೊಬೈಲ್ ಬಳಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

counting centers bengaluru 3

ಮತ ಎಣಿಕೆ ಕಾರ್ಯದಲ್ಲಿ ಕಾರ್ಯನಿರ್ವಹಿಸುವ ಯಾವುದೇ ಸಿಬ್ಬಂದಿ ಎಣಿಕೆ ಕೇಂದ್ರದಲ್ಲಿ ಮೊಬೈಲ್/ಬ್ಯಾಗ್ ತರುವ ಹಾಗಿಲ್ಲ. ಏಜೆಂಟ್‌ಗಳು ಕೂಡ ತರಲು ಅವಕಾಶವಿಲ್ಲ ಎಂದರು.

ಎಣಿಕೆ ಕಾರ್ಯಕ್ಕೆ ನಿಯೋಜನೆ ಮಾಡಿರುವ ಸಿಬ್ಬಂದಿಗೆ ಮತ ಎಣಿಕೆ ಕೇಂದ್ರಕ್ಕೆ ಬರುವವರೆಗೆ ಯಾವ ಟೇಬಲ್‌ನಲ್ಲಿ ಕೂರಲಿದ್ದೇವೆ ಎಂಬುದು ತಿಳಿದಿರುವುದಿಲ್ಲ. ಜೂನ್ 4ರ ಬೆಳಗ್ಗೆ ಬಂದ ಬಳಿಕ ತಿಳಿಯಲಿದೆ. ಬೆಳಗ್ಗೆ 7:45ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಾಗುತ್ತದೆ. 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆ ಪ್ರಾರಂಭವಾದ ಬಳಿಕ ಇವಿಎಂ ಎಣಿಕೆ ಆರಂಭವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಕಂಪನಿ ಹೆಸರಲ್ಲಿ ಅಕ್ರಮ ಖಾತೆ ತೆರೆದು ಹಣ ವರ್ಗಾವಣೆ: ಹ್ಯಾಪಿಯೆಸ್ಟ್‌ ಮೈಂಡ್ಸ್‌ ಟೆಕ್ನಾಲಜಿ ಕಂಪನಿ ಸ್ಪಷ್ಟನೆ

ಬೆಂಗಳೂರು ನಗರ ಜಿಲ್ಲೆಯ 3 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮತ್ತು ಸ್ಟ್ರಾಂಗ್ ರೂಂ ಕೇಂದ್ರಗಳ ವಿವರ:

1. ಬೆಂಗಳೂರು ಕೇಂದ್ರ: ಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆ, ವಸಂತನಗರ, ಬೆಂಗಳೂರು.
ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8
ಮತಗಟ್ಟೆಗಳ ಸಂಖ್ಯೆ: 2125
ಮತ ಎಣಿಕೆ ಕೊಠಡಿಗಳ ಸಂಖ್ಯೆ: 10
ಒಟ್ಟು ಟೇಬಲ್‌ಗಳ ಸಂಖ್ಯೆ: 135
ಒಟ್ಟು ಸಿಬ್ಬಂದಿಯ ಸಂಖ್ಯೆ: 416

2. ಬೆಂಗಳೂರು ಉತ್ತರ: ಸೆಂಟ್ ಜೋಸೆಫ್ ಕಾಲೇಜು, ಮಲ್ಯ ರಸ್ತೆ, ಬೆಂಗಳೂರು.
ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8
ಮತಗಟ್ಟೆಗಳ ಸಂಖ್ಯೆ: 2911
ಮತ ಎಣಿಕೆ ಕೊಠಡಿಗಳ ಸಂಖ್ಯೆ: 19
ಒಟ್ಟು ಟೇಬಲ್‌ಗಳ ಸಂಖ್ಯೆ: 130
ಒಟ್ಟು ಸಿಬ್ಬಂದಿಯ ಸಂಖ್ಯೆ: 390

3. ಬೆಂಗಳೂರು ದಕ್ಷಿಣ: ಎಸ್.ಎಸ್.ಎಂ.ಆರ್.ವಿ ಕಾಲೇಜು, 9ನೇ ಬ್ಲಾಕ್, ಜಯನಗರ, ಬೆಂಗಳೂರು.
ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8
ಮತಗಟ್ಟೆಗಳ ಸಂಖ್ಯೆ: 2120
ಮತ ಎಣಿಕೆ ಕೊಠಡಿಗಳ ಸಂಖ್ಯೆ: 9
ಒಟ್ಟು ಟೇಬಲ್‌ಗಳ ಸಂಖ್ಯೆ: 118
ಒಟ್ಟು ಸಿಬ್ಬಂದಿಯ ಸಂಖ್ಯೆ: 354

ಈ ವೇಳೆ ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್, ದಯಾನಂದ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:bengaluruCounting CentresLok Sabha elections 2024ಬೆಂಗಳೂರುಮತ ಎಣಿಕೆ ಕೇಂದ್ರಗಳು
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
17 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
34 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
46 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
1 hour ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?