– ಮಂಡ್ಯ ಕ್ಷೇತ್ರ ಕಾಂಗ್ರೆಸ್‍ಗೆ ಹಂಚಿಕೆಯಾದ್ರೆ ಸುಮಲತಾ ನಮ್ಮ ಅಭ್ಯರ್ಥಿ
– ಹಿಂದೂ, ಮುಸ್ಲಿಂ ಮಧ್ಯೆ ಜಗಳ ಹಚ್ಚೋ ಅನಂತಕುಮಾರ್ ಹೆಗ್ಡೆಗೆ ಜನ ಬುದ್ಧಿ ಕಲಿಸ್ತಾರೆ
ಬಾಗಲಕೋಟೆ: ನಟಿ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನ್ನ ಬೆಂಬಲವಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸೀಟು ಹಂಚಿಕೆಯಾಗಬೇಕಿದೆ. ಮಂಡ್ಯ ಕ್ಷೇತ್ರ ಜೆಡಿಎಸ್‍ಗೆ ಹೋಗುತ್ತೋ ಅಥವಾ ಕಾಂಗ್ರೆಸ್‍ಗೆ ಬರುತ್ತೋ ಗೊತ್ತಿಲ್ಲ. ಒಂದು ವೇಳೆ ಮಂಡ್ಯ ಕ್ಷೇತ್ರ ಕಾಂಗ್ರೆಸ್ಸಿಗೆ ಹಂಚಿಕೆಯಾದರೆ ಸುಮಲತಾ ಅವರೇ ನಮ್ಮ ಅಭ್ಯರ್ಥಿ. ಸುಮಲತಾ ಅಂಬರೀಶ್ ಅವರ ಹೆಸರು ಶಿಫಾರಸ್ಸಿಗೆ ನನ್ನ ಮೊದಲ ಬೆಂಬಲವಿದೆ ಎಂದು ಹೇಳಿದರು.
Advertisement
Advertisement
ದಿವಂಗತ ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಅವರ ನಿಧನದ ಅನುಕಂಪದ ಸಹಕಾರದಿಂದ ಸುಮಲತಾ ಮಂಡ್ಯದಿಂದ ಗೆಲ್ಲುತ್ತಾರೆ. ಹೀಗಾಗಿ ಅವರಿಗೆ ನನ್ನ ಬೆಂಬಲವಿದೆ ಎಂದು ತಿಳಿಸಿದರು.
Advertisement
ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಅವರಿಗೆ ಕಾರವಾರ ಜನ ಬುದ್ಧಿ ಕಲಿಸುತ್ತಾರೆ. ರಾಮಕೃಷ್ಣ ಹೆಗಡೆ ಸೇರಿದಂತೆ ಹೆಗಡೆ ಮನೆತನಗಳ ಹೆಸರಿಗೆ ಅನಂತಕುಮಾರ್ ಹೆಗ್ಡೆ ಮಸಿ ಬಳಿಯುತ್ತಿದ್ದಾರೆ ಎಂದು ಕಿಡಿಕಾರಿದರು.
Advertisement
ಒಂದು ವೇಳೆ ನಾನು ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವನಾಗಿದ್ದರೆ ಯುವಕರಿಗೆ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ದೊಡ್ಡ ಆಂದೋಲನವನ್ನೇ ಆರಂಭಿಸುತ್ತಿದ್ದೆ. ಆದರೆ ಸಂವಿಧಾನದ ಅರ್ಹತೆ, ಅವಕಾಶಗಳ ಆಧಾರದ ಮೇಲೆ ಲೋಕಸಭೆ ಸದಸ್ಯರಾಗಿರುವ ಅನಂತಕುಮಾರ್ ಹೆಗ್ಡೆ, ಸಂವಿಧಾನವನ್ನೇ ಬದಲಾವಣೆ ಮಾಡಲು ಹೊಟಿದ್ದಾರೆ ಎಂದು ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv