ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತೋ ಇಲ್ವಾ ಎಂಬ ಅನುಮಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ನಿಗದಿಯಂತೆ ಸಕಾಲಕ್ಕೆ ಲೋಕಸಭಾ ಚುನಾವಣೆ ನಡೆಯಲಿದೆ. ದೇಶದಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆ ಲೋಕಸಭೆ ಚುನಾವಣಾ ವೇಳಾಪಟ್ಟಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
Advertisement
Advertisement
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹಠಾತ್ ಉದ್ವಿಗ್ನತೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಶುಕ್ರವಾರ ದೃಢಪಡಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮತದಾನದ ಸಿದ್ಧತೆಗಳನ್ನು ಪರಿಶೀಲಿಸಲು ಲಕ್ನೋಗೆ ಸುನಿಲ್ ಆಗಮಿಸಿದ್ದರು.
Advertisement
ಚುನಾವಣಾ ಆಯೋಗದ ಹೊಸ ಅಧಿಸೂಚನೆಯ ಪ್ರಕಾರ, ಈ ಭಾರಿ ಅಭ್ಯರ್ಥಿಗಳು ವಿದೇಶದಲ್ಲಿ ತಮ್ಮ ಆಸ್ತಿಗಳ ವಿವರಗಳನ್ನು ನೀಡಬೇಕು. ಐ-ಟಿ ಇಲಾಖೆ ಇದನ್ನು ಪರಿಶೀಲಿಸುತ್ತದೆ. ಇದರಲ್ಲಿ ಯಾವುದಾದರೂ ವ್ಯತ್ಯಾಸಗಳು ಕಂಡು ಬಂದರೆ ಬಳಿಕ ಅದನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್‍ನಲ್ಲಿ ಪ್ರಕಟಿಸಲಾಗುತ್ತದೆ. ಇಲ್ಲದಿದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಿದೆ ಆಯೋಗ ತಿಳಿಸಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv