Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
Last updated: April 16, 2026 8:07 pm
Public TV
Share
3 Min Read
Amit Shah 1
SHARE

– ದಕ್ಷಿಣ ಭಾರತದ ರಾಜ್ಯಗಳ ಸೀಟು ಕಡಿಮೆಯಾಗಲ್ಲ
– ಸಂಸದರ ಸಂಖ್ಯೆ 129 ರಿಂದ 195ಕ್ಕೆ ಏರಿಕೆ
– ಲೋಕಸಭೆಯಲ್ಲಿ ಅಮಿತ್‌ ಶಾ ಉತ್ತರ

ನವದೆಹಲಿ: ಕ್ಷೇತ್ರ ಪುನರ್ ವಿಂಗಡಣೆಯ ನಂತರ ಕರ್ನಾಟಕದಲ್ಲಿ (Karnataka) ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42 ಕ್ಕೆ ಏರಿಕೆಯಾಗಲಿದೆ ಎಂದು ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಮಸೂದೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂಬ ಆರೋಪಕ್ಕೆ ಲೋಕಸಭೆಯಲ್ಲಿ ಉತ್ತರ ನೀಡಿದ ಅವರು, ಕ್ಷೇತ್ರ ಪುನರ್ ವಿಂಗಡನೆ ಮಸೂದೆಯಿಂದಾಗಿ ಕರ್ನಾಟಕದ ಪ್ರಾತಿನಿಧ್ಯವು 14 ಸ್ಥಾನಗಳಷ್ಟು ಹೆಚ್ಚಾಗಲಿದ್ದು, ಒಟ್ಟು 42 ಸಂಸದರು ರಾಜ್ಯದಿಂದ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ಸದ್ಯ ಲೋಕಸಭೆಯ (Lok Sabha) ಒಟ್ಟು 543 ಸ್ಥಾನಗಳಲ್ಲಿ ಕರ್ನಾಟಕದ ಪಾಲು ಶೇ. 5.15 ರಷ್ಟಿದೆ. 816 ಸದಸ್ಯರ ಸದನದಲ್ಲಿ ಅದರ ಪಾಲು ಸುಮಾರು 5.14 ಪ್ರತಿಶತದಷ್ಟಿರುತ್ತದೆ. ಮರುವಿಂಗಡಣೆಯ ನಂತರ ಇದರ ಪ್ರಾತಿನಿಧ್ಯ ಶೇ. 5.44 ಕ್ಕೆ ಏರಿಕೆಯಾಗಲಿರುವುದರಿಂದ ಕರ್ನಾಟಕಕ್ಕೆ ಯಾವುದೇ ನಷ್ಟವಾಗುವುದಿಲ್ಲ ಎಂದರು.

ಜನಸಂಖ್ಯೆ ನಿಯಂತ್ರಿಸಿದ (Population Control) ಕಾರಣಕ್ಕಾಗಿ ದಕ್ಷಿಣ ಭಾರತದ ರಾಜ್ಯಗಳು ಲೋಕಸಭೆಯಲ್ಲಿ ಸ್ಥಾನಗಳನ್ನು ಕಳೆದುಕೊಳ್ಳಲಿವೆ ಎಂಬ ಆತಂಕಕ್ಕೆ ಉತ್ತರಿಸಿದ ಅವರು, ದಕ್ಷಿಣದ ರಾಜ್ಯಗಳು ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿವೆ. ಆದರೆ, ಉತ್ತರ ಭಾರತದ ರಾಜ್ಯಗಳ ಜನಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ದಕ್ಷಿಣದ ರಾಜ್ಯಗಳ ರಾಜಕೀಯ ಪ್ರಾಬಲ್ಯ ಕುಗ್ಗುವುದಿಲ್ಲ. ಸ್ಥಾನಗಳ ಹೆಚ್ಚಳವು ದಕ್ಷಿಣದ ರಾಜ್ಯಗಳಿಗೂ ಸಮಾನವಾಗಿ ಅನ್ವಯಿಸುವುದರಿಂದ, ಆ ರಾಜ್ಯಗಳ ಧ್ವನಿ ಸಂಸತ್ತಿನಲ್ಲಿ ಗಟ್ಟಿಯಾಗಿಯೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳ ಸ್ಥಾನಗಳು ಹೆಚ್ಚಾಗಲಿವೆಯೇ ಹೊರತು ಯಾವುದೇ ನಷ್ಟವಾಗುವುದಿಲ್ಲ ಎಂದು ಭರವಸೆ ನೀಡಿದರು.

#WATCH | Speaking in Lok Sabha on women’s reservation and delimitation, Union Home Minister Amit Shah says, “The biggest narrative being created is that these three bills, the Constitution Amendment Bill, two laws on delimitation, and changes to the constituency election law,… pic.twitter.com/kv9bcJEL5E

— ANI (@ANI) April 16, 2026

ದಕ್ಷಿಣ ರಾಜ್ಯಗಳ ಲೋಕಸಭಾ ಸ್ಥಾನಗಳ ಸಂಖ್ಯೆ ಎಷ್ಟು ಏರಿಕೆಯಾಗಲಿದೆ ಎಂಬುದನ್ನು ವಿವರಿಸಿದ ಅವರು, ಈ ರಾಜ್ಯಗಳ ಒಟ್ಟು ಲೋಕಸಭಾ ಸ್ಥಾನಗಳ ಸಂಖ್ಯೆಯು 195 ಕ್ಕೆ ಏರಿಕೆಯಾಗಲಿದೆ. ಕರ್ನಾಟಕ 28 ರಿಂದ 42, ತಮಿಳುನಾಡು 39 ರಿಂದ 59, ಕೇರಳ 20 ರಿಂದ 30, ಆಂಧ್ರಪ್ರದೇಶ 25 ರಿಂದ 38, ತೆಲಂಗಾಣ 17 ರಿಂದ 26ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದರು.

543 ಮಂದಿ ಇರುವ ಲೋಕಸಭೆಯಲ್ಲಿ ಹಾಲಿ ದಕ್ಷಿಣ ಭಾಗದ 129 ಸಂಸದರು ಈ ಸದನದಲ್ಲಿ ಕುಳಿತಿದ್ದಾರೆ. ಅದು ಸರಿಸುಮಾರು ಶೇ. 23.76 ರಷ್ಟು ಆಗುತ್ತದೆ. 816 ಸದಸ್ಯರ ಸದನದಲ್ಲಿ 195 ಸಂಸದರು ಕುಳಿತುಕೊಳ್ಳುತ್ತಾರೆ ಮತ್ತು ಅವರ ಪ್ರಾತಿನಿಧ್ಯ 23.97% ಆಗಿರುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಖಾಲಿ ಚೆಕ್ ಆಫರ್‌ ನೀಡಿ ವಿಪಕ್ಷಗಳನ್ನು ಪೇಚಿಗೆ ಸಿಲುಕಿಸಿದ ಮೋದಿ

ಕ್ಷೇತ್ರಗಳ ಸಂಖ್ಯೆ ಹೆಚ್ಚಾಗುವುದರಿಂದ ಪ್ರತಿಯೊಬ್ಬ ಸಂಸದರು ಪ್ರತಿನಿಧಿಸುವ ಮತದಾರರ ಸಂಖ್ಯೆ ಕಡಿಮೆಯಾಗುತ್ತದೆ. ಉದಾಹರಣೆಗೆ ಕರ್ನಾಟಕದಲ್ಲಿ ಒಬ್ಬ ಸಂಸದರು 25 ಲಕ್ಷ ಜನರ ಬದಲಿಗೆ ಸುಮಾರು 16 ಲಕ್ಷ ಜನರನ್ನು ಪ್ರತಿನಿಧಿಸುತ್ತಾರೆ, ಇದರಿಂದ ಅಭಿವೃದ್ಧಿ ಕಾರ್ಯಗಳು ಸುಲಭವಾಗುತ್ತವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಅಮಿತ್ ಶಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಏನಿದು ಪ್ರೊ-ರಾಟ?
ದಕ್ಷಿಣ ಭಾರತದ ರಾಜ್ಯಗಳ ಆತಂಕವನ್ನು ಹೋಗಲಾಡಿಸಲು, ಸರ್ಕಾರವು ಜನಸಂಖ್ಯೆಯ ಆಧಾರದ ಮೇಲೆ ಸ್ಥಾನಗಳನ್ನು ಹಂಚುವ ಬದಲಿಗೆ, ಈಗಿರುವ ಅದೇ ಅನುಪಾತದಲ್ಲಿ ಸ್ಥಾನಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಅಂದರೆ ಸಂಸತ್ತಿನಲ್ಲಿ ರಾಜ್ಯವೊಂದರ ಇಂದಿನ ಪ್ರಾತಿನಿಧ್ಯದ ಶೇಕಡಾವಾರು ಪಾಲು ಹೊಸ ವ್ಯವಸ್ಥೆಯಲ್ಲೂ ಹೆಚ್ಚು ಕಡಿಮೆ ಅಷ್ಟೇ ಇರಲಿದೆ.

ಲೋಕಸಭೆಯಲ್ಲಿ ಏಪ್ರಿಲ್ 16 ರಂದು ಮಂಡಿಸಲಾದ ‘ಕ್ಷೇತ್ರ ಮರುವಿಂಗಡಣೆ ಮಸೂದೆ-2026’ ರ ಅನ್ವಯ ದೇಶದ ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಈಗಿರುವ ಸಂಖ್ಯೆಗಿಂತ ಸಮಾನವಾಗಿ ಶೇ. 50 ರಷ್ಟು ಹೆಚ್ಚಿಸುವ ವಿಶಿಷ್ಟ ಸೂತ್ರವನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಇದನ್ನೂ ಓದಿ: ಮಹಿಳಾ ಮೀಸಲಾತಿಯಲ್ಲಿ ಮುಸ್ಲಿಮ್‌ ಮಹಿಳೆಯರಿಗೆ ಮೀಸಲಾತಿ ನೀಡಿ: ಎಸ್‌ಪಿ ಆಗ್ರಹ

ಶೇ.33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವಾಗ, ಪ್ರಸ್ತುತ ಇರುವ ಪುರುಷ ಸಂಸದರ ಸಂಖ್ಯೆಗೆ ಧಕ್ಕೆಯಾಗದಂತೆ ಹೆಚ್ಚುವರಿ ಸ್ಥಾನಗಳನ್ನು ಸೃಷ್ಟಿಸುವುದು ಈ 50% ಹೆಚ್ಚಳದ ಹಿಂದಿನ ಮುಖ್ಯ ಉದ್ದೇಶವಾಗಿದೆ.

ಈ ಪ್ರಕ್ರಿಯೆಯನ್ನು ಸುಗಮಗೊಳಿಸಲು ಸಂವಿಧಾನದ 81 ಮತ್ತು 82ನೇ ವಿಧಿಗಳಿಗೆ ತಿದ್ದುಪಡಿ ತರಲಾಗುತ್ತಿದೆ, ಇದು 2011ರ ಜನಗಣತಿಯನ್ನೇ ಆಧಾರವಾಗಿರಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.

TAGGED:Amit Shahkarnatakapopulationಅಮಿತ್ ಶಾಕರ್ನಾಟಕಜನಸಂಖ್ಯೆಲೋಕಸಭೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
17 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
21 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
49 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
57 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
59 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?