ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಪ್ರಬಲ ಮೈತ್ರಿಗೆ ಕರೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡರು, ಪ್ರತಿಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಲ್ಲವೇ, ಬಿಎಸ್ಪಿ ವರಿಷ್ಠೆ ಮಾಯಾವತಿ ಅವರನ್ನ ಬಿಂಬಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಖಾಸಗಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಇಂತಹದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕವಷ್ಟೇ ಪ್ರತಿಪಕ್ಷಗಳ ಮೈತ್ರಿಕೂಟದ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಹೋರಾಟಕ್ಕೆ ಎಚ್‍ಡಿಡಿ ಬೆಂಬಲ
Advertisement
Advertisement
ಇದರ ಜತೆಗೆ ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ ವಿಚಾರದಲ್ಲಿ ಕೇಂದ್ರದ ವಿರುದ್ಧ ಸಮರ ಸಾರಿರುವ ದೀದಿ ಪ್ರತಿಪಕ್ಷಗಳ ಒಗ್ಗಟ್ಟಿಗೆ ತೀವ್ರ ಪ್ರಯತ್ನ ನಡೆಸುತ್ತಿರುವ ಕಾರಣಕ್ಕೆ ಗೌಡರ ಮಾತುಗಳು ಹೆಚ್ಚು ಪ್ರಸ್ತುತವೆನಿಸಿವೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಧಾನಿಯಾಗಲು ನನ್ನ ತಕರಾರಿಲ್ಲ ಎಂದ್ರು ಎಚ್‍ಡಿಡಿ
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews