ಕಲಬುರಗಿ: ಗ್ರಾಮ ಪಂಚಾಯಿತಿ ಸಿಬ್ಬಂದಿಯಾಗಿದ್ದ ಗುರುಸಿದ್ದಯ್ಯ ಅವರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳಲು ಮತ್ತು 6 ತಿಂಗಳ ವೇತನ ಮಾಡಲು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ (Lokayukta Police) ಸಿಕ್ಕಿಬಿದ್ದು ನ್ಯಾಯಾಂಗ ಬಂಧನಕ್ಕೊಳಗಾಗಿರುವ ಕಲಬುರಗಿ ತಾಲೂಕಿನ ಕವಲಗಾ (ಬಿ) ಗ್ರಾಮ ಪಂಚಾಯತಿಯ ಪಿಡಿಒ (PDO) ಪ್ರೀತಿರಾಜ್ ಅವರನ್ನು ಅಮಾನತುಗೊಳಿಸಿ ಜಿಪಂ ಸಿಇಒ ಆದೇಶ ಹೊರಡಿಸಿದ್ದಾರೆ.
Advertisement
ಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ನಾಟಕ ನಾಗರಿಕ ಸೇವಾ (ವರ್ಗಿಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು-1957ರ ನಿಯಮ 10(1)(ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಟ್ವಿಸ್ಟ್ – ದೂರು ಹಿಂಪಡೆಯಲು ಸ್ನೇಹಮಯಿ ಕೃಷ್ಣಗೆ ಆಮಿಷ ಆರೋಪ
Advertisement
Advertisement
ಅಮಾನತ್ತಿನ ಅವಧಿಯಲ್ಲಿ ನೌಕರರು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟು ಬೇರೆಲ್ಲೂ ತೆರಳುವಂತಿಲ್ಲ. ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ-1957ರ ನಿಯಮ 98ರ ಅನುಸಾರ ಜೀವನ ನಿರ್ವಹಣೆ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ನೇಮಕ ವಿಚಾರದಲ್ಲಿ ಗಲಾಟೆ – ಕೇಂದ್ರಕ್ಕೆ ಸ್ಥಳೀಯರಿಂದಲೇ ಬೀಗ