ಮೈಸೂರು: ನಗರದಲ್ಲಿ ಲೋಕಾಯುಕ್ತ ಪೊಲೀಸರು (Lokayukta Police) ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ್ದಾರೆ. ಇಬ್ಬರು ಭ್ರಷ್ಟರಿಗೆ (Corrupt Officer) ಸೇರಿದ ಒಟ್ಟು 7 ಸ್ಥಳದಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆ ಜೆ.ಇ. ಕೆ.ಆರ್.ಚಂದ್ರಶೇಖರ್ ಮನೆ ಹಾಗೂ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ. ಚಂದ್ರಶೇಖರ್‌ಗೆ ಸಂಬಂಧಿಸಿದ ಮೈಸೂರಿನ ವಿಜಯ ನಗರದ ನಿವಾಸ, ಕೆಜಿ ಕೊಪ್ಪಲು ನಿವಾಸ ಹಾಗೂ ಟಿ.ನರಸೀಪುರ ಕಚೇರಿ ಏರಿ 4 ಕಡೆ ಏಕಕಾಲದಲ್ಲಿ ದಾಳಿ ನಡೆಸಿ 60 ಲಕ್ಷ ಹಣ ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಇಲಾಖೆ ಡೆಫ್ಯುಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಜಕಾರ್ತಿಗೆ ಸೇರಿದ ಎರಡು ನಿವಾಸ ಹಾಗೂ ಕಚೇರಿಯಲ್ಲಿ ಲೊಕಾಯುಕ್ತ ಪೊಲೀಸರ ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್


