ಬಾಗಲಕೋಟೆ: ಮಧ್ಯವರ್ತಿಗಳ ಹಾವಳಿ, ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಹಾಗೂ ಸಾರ್ವಜನಿಕರಿಗೆ ಅನಗತ್ಯ ಕಿರುಕುಳ ನೀಡುತ್ತಿರುವ ದೂರುಗಳ ಹಿನ್ನೆಲೆಯಲ್ಲಿ, ಜಿಲ್ಲೆಯ 9 ಉಪನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ(Lokayukta Raid) ನಡೆಸಿದ್ದಾರೆ.
ಬಾಗಲಕೋಟೆ, ಬಾದಾಮಿ, ಹುನಗುಂದ, ಮುಧೋಳ, ಬೀಳಗಿ, ತೇರದಾಳ, ಇಳಕಲ್, ಗುಳೇದಗುಡ್ಡ ಹಾಗೂ ಕೆರೂರು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಲೋಕಾಯುಕ್ತ ಎಸ್ಪಿ ಮಹಾಲಿಂಗ ನಂದಗಾಂವಿ ನಿರ್ದೇಶನದಲ್ಲಿ, ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ 7 ಸಿಪಿಐ ಹಾಗೂ 24 ಸಿಬ್ಬಂದಿ ಒಳಗೊಂಡ 32 ಜನರ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.
ಸದ್ಯ ಕಾರ್ಯಾಚರಣೆ ಮುಂದುವರೆದಿದ್ದು, ಪರಿಶೀಲನಾ ವರದಿಯ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಲೋಕಾಯುಕ್ತ ಎಸ್.ಪಿ ಮಹಾಲಿಂಗ್ ನಂದಗಾಂವಿ ತಿಳಿಸಿದ್ದಾರೆ.
