ಚಿತ್ರದುರ್ಗ: ದಾವಣಗೆರೆ, ಚಿತ್ರದುರ್ಗ (Chitradurga) ಜಿಲ್ಲೆ ಸೇರಿದಂತೆ ವಿವಿಧೆಡೆ ಅಧಿಕಾರಿಗಳ ಮನೆ ಮೇಲೆ ಗುರುವಾರ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ (Karnataka Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿರುವ ದೂರು ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಕೆ. ಮಹೇಶ್ ಮತ್ತು ಅವರ ಪತ್ನಿ ಬಿಬಿಎಂಪಿ ಎಇ ಭಾರತಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಹೊಳಲ್ಕೆರೆ ಬಿಜೆಪಿ ಶಾಸಕನಿಂದ ಬೆದರಿಕೆ – ಡೆತ್‌ನೋಟ್ ಬರೆದು ಗ್ರಾ.ಪಂ. ಕ್ಲರ್ಕ್ ಆತ್ಮಹತ್ಯೆ
Advertisement
Advertisement
ದಾವಣಗೆರೆಯಲ್ಲಿರುವ (Davanagere) ಕೆ.ಮಹೇಶ್, ಕೆ.ಭಾರತಿ ದಂಪತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅಟ್ಯಾಕ್ ಮಾಡಿದ್ದು, ದಾಳಿಯ ವೇಳೆ 15 ಲಕ್ಷ ರೂ.ಗಿಂತಲೂ ಅಧಿಕ ನಗದು, 1 ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿದೆ. ಈ ಹಿಂದೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಹಾಗೂ ಪಿಆರ್‌ಇಡಿ ಇಲಾಖೆಯಲ್ಲಿ ಕೆಲಸಮಾಡಿದ್ದ ಕೆ.ಭಾರತಿ ಮಹೇಶ್ ಮನೆ ಮೇಲೆ ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಮಡಿದವರ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ, ಸರ್ಕಾರಿ ನೌಕರಿ ಕೊಡಿ: ಸಿ.ಟಿ. ರವಿ ಆಗ್ರಹ
Advertisement
Advertisement
ಹಲವು ಬಾರಿ ಇವರ ವಿರುದ್ಧ ಭ್ರಷ್ಟಾಚಾರದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಅವರ ಮನೆಯಲ್ಲಿನ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಶೋಧಕಾರ್ಯ ಮುಂದುವರಿದಿದೆ.
Web Stories