ಬೆಂಗಳೂರು: ಲಂಚ (Bribe) ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಸೈಬರ್ ಠಾಣೆ ಹೆಡ್ ಕಾನ್‌ಸ್ಟೇಬಲ್‌ವೊಬ್ಬರು ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.
ಎಂ.ಲೋಕೇಶ್ ಬಂಧನಕ್ಕೊಳಗಾದ ಹೆಡ್ ಕಾನ್‌ಸ್ಟೇಬಲ್. ವ್ಯಕ್ತಿಯೊಬ್ಬರಿಂದ 25,000 ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಹಾವೇರಿಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ – ಮೂವರು ಕಾರ್ಮಿಕರು ಸಜೀವ ದಹನ
Advertisement
Advertisement
ಚಾರ್ಜ್‌ಶೀಟ್‌ನಲ್ಲಿ ಆರೋಪಿ ಹೆಸರನ್ನ ಕೈ ಬಿಡಲಿಕ್ಕೆ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಪ್ಪತೈದು ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದಾರೆ.
Advertisement
ರಮೇಶ್ ಎಂಬಾತನ ವಿರುದ್ಧ ಅತ್ತಿಬೆಲೆ ಠಾಣೆಯಲ್ಲಿ ಜಾತಿನಿಂದನೆ, ಅತ್ಯಾಚಾರ ಕೇಸ್ ದಾಖಲಾಗಿತ್ತು. ಪ್ರಕರಣದಲ್ಲಿ ರಮೇಶ್ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ರಮೇಶ್ ತಾಯಿ ರೂಪಾ ಎಂಬವರ ಬಳಿ ಹೆಡ್ ಕಾನ್‌ಸ್ಟೇಬಲ್ ಲೋಕೇಶ್ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇದನ್ನೂ ಓದಿ: CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ
Advertisement
ಲೋಕೇಶ್ ವಿರುದ್ಧ ಆರೋಪಿ ತಾಯಿ, ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ಆನಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಲೋಕೇಶ್‌ರನ್ನು ಬಂಧಿಸಲಾಗಿದೆ.
Web Stories