ಕಾರವಾರ: ವಶಪಡಿಸಿಕೊಂಡಿದ್ದ ವಸ್ತುಗಳನ್ನು ಕೋರ್ಟ್‌ನಿಂದ ಬಿಡಿಸಿಕೊಳ್ಳಲು ದೂರುದಾರನಿಂದ ಲಂಚ ಪಡೆಯುತ್ತಿದ್ದಾಗ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಆರು ಸಾವಿರ ಲಂಚ ಪಡೆಯುತ್ತಿದ್ದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಪ್ರಕಾಶ್ ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದ ಎಪಿಪಿ.
ಪವನ್ ಕುಮಾರ್ ಎಂಬವರು ತಮ್ಮ ಮನೆಯಲ್ಲಿ ಆದ ಕಳ್ಳತನದಲ್ಲಿ ವಶಪಡಿಸಿಕೊಂಡಿದ್ದ ವಸ್ತುಗಳು ಹಾಗೂ ಹಣವನ್ನು ಪಡೆಯುವ ಸಲವಾಗಿ ಎಪಿಪಿ 6 ಸಾವಿರ ಲಂಚ ಕೇಳಿದ್ದರು. ಈ ಕುರಿತು ಪವನ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಲೋಕಾಯುಕ್ತ ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ದಾಳಿ ನಡೆಸಿ ಹಣ ಪಡೆಯುವಾಗ ವಶಕ್ಕೆ ಪಡೆದಿದ್ದಾರೆ.
ಘಟನೆ ಸಂಬಂಧ ಕಾರವಾರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.