ಬೆಂಗಳೂರು: ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು (Lokayukta) ಫಿಲ್ಮಿ ಸ್ಟೈಲ್‍ನಲ್ಲಿ 15 ಕಿ.ಮೀ ಚೇಸಿಂಗ್ ಮಾಡಿ ಹಿಡಿದ ಘಟನೆ ನೆಲಮಂಗಲ (Nelamangala) ಬಳಿಯ ಸೊಂಡೇಕೊಪ್ಪದಲ್ಲಿ ನಡೆದಿದೆ.
ರಂಗದಾಮಯ್ಯ ಎಂಬುವವರು ಕೆ.ಜಿ ಸರ್ಕಲ್ ಬಳಿಯಿರುವ ತಹಶೀಲ್ದಾರ್ ಆಫೀಸ್‍ನ ಫುಡ್ ಇನ್‍ಸ್ಪೆಕ್ಟರ್ ಆಗಿರುವ ಮಹಂತೇಗೌಡ ಬಳಿ ಟ್ರೇಡ್ ಲೈಸೆನ್ಸ್ ಮಾಡಿಸಲು ತೆರಳಿದ್ದರು. ಈ ವೇಳೆ ಅಧಿಕಾರಿ 1 ಲಕ್ಷ ರೂ. ಹಣವನ್ನು ಲಂಚವನ್ನಾಗಿ ಕೇಳಿದ್ದ. ಮುಂಗಡವಾಗಿ 43 ಸಾವಿರ ರೂ. ಹಣವನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: ಅಂಗಡಿಯಲ್ಲಿ ಯಾರೂ ಇಲ್ಲದ್ದನ್ನ ಗಮನಿಸಿ ಕ್ಯಾಶ್ ಕೌಂಟರ್‌ನಿಂದ ಹಣ ಎತ್ಕೊಂಡು ಎಸ್ಕೇಪ್ ಆದ ಕಳ್ಳ
Advertisement
Advertisement
ಲೋಕಾಯುಕ್ತ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆದು ಟ್ರ್ಯಾಪ್ ಮಾಡಿದ್ದಾರೆ. ಹಣ ಪಡೆಯುವ ವೇಳೆ ಟ್ರ್ಯಾಪ್ ಎಂದು ತಿಳಿದು ಪರಾರಿಯಾಗಲು ಮಹಂತೇಗೌಡ ಯತ್ನಿಸಿದ್ದಾನೆ. ಹಣ ಪಡೆದು ಸುಮಾರು 15 ಕಿ.ಮೀ ತೆರಳಿದ್ದಾನೆ. ಆದರೆ ಬೆನ್ನಟ್ಟಿದ ಲೋಕಾ ಅಧಿಕಾರಿಗಳು ಮಹಂತೇಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
Advertisement
ಈ ವೇಳೆ ಮಹಂತೇಗೌಡ ತಪ್ಪಿಸಿಕೊಳ್ಳಲು ಲೋಕಾಯುಕ್ತ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಲೋಕಾಯುಕ್ತ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
Advertisement
Web Stories