ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌

Public TV
1 Min Read
lokayukta raid 1

– ಬೆಂಗ್ಳೂರಿನ ಕೆಆರ್‌ ಪುರಂ ತಹಶೀಲ್ದಾರ್‌ ಮನೆಯಲ್ಲಿ 40 ಲಕ್ಷ ನಗದು ವಶ

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta Raid) ಶಾಕ್‌ ನೀಡಿದೆ.

ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್‌ ಅಜಿತ್‌ ರೈ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಿತು. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮನೆ, ಕಚೇರಿ ಸೇರಿದಂತೆ 10 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕೂದಲೆಳೆಯ ಅಂತರದಲ್ಲಿ ಹುಬ್ಬಳ್ಳಿಯಲ್ಲಿ ತಪ್ಪಿತು ದೊಡ್ಡ ದುರಂತ

lokayukta raid

ಈ ವೇಳೆ ಮನೆಯಲ್ಲಿದ್ದ 40 ಲಕ್ಷ ರೂ. ನಗದು ಸೇರಿದಂತೆ ಅನೇಕ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ.

ವಿದ್ಯಾಗಿರಿಯ ಅಕ್ಕಿಮರಡಿ ಲೇಔಟನಲ್ಲಿರುವ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬೀಳಗಿ ಭಾಗದ ಸಹಾಯಕ ಕೃಷಿ ನಿರ್ದೇಶಕ ಕೃಷ್ಣ ಶಿರೂರು ಮನೆ ಮೇಲೆ ದಾಳಿ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಇದನ್ನೂ ಓದಿ: ಮಂತ್ರಾಲಯದಲ್ಲಿ 27 ದಿನಕ್ಕೆ 2.89 ಕೋಟಿ ರೂ. ಕಾಣಿಕೆ ಸಂಗ್ರಹ

Share This Article