ಹಾಸನ/ಚಿಕ್ಕಮಗಳೂರು/ಮಂಡ್ಯ: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಬುಧವಾರ ದಾಳಿ ನಡೆಸಿದೆ.
ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ
Advertisement
Advertisement
ಚಿಕ್ಕಮಗಳೂರಿನಲ್ಲಿ ಕಡೂರು ಪಟ್ಟಣದಲ್ಲಿರುವ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ನೇತ್ರಾವತಿ ಅವರು ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿದ್ದಾರೆ. 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪ ಹೊತ್ತಿದ್ದಾರೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.
Advertisement
Advertisement
ಇತ್ತ ಮಂಡ್ಯದಲ್ಲಿ PWD ಇಲಾಖೆ EE ಹರ್ಷ ಎಂಬವರ ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೂ ಲೋಕ ದಾಳಿ ಮಾಡಿದೆ. ಇವರ ಮನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿದೆ. ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಆರು ಕಡೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ ಬಾಂಬ್ ಬೆದರಿಕೆ – ಆಸಾಮಿ ಅಂದರ್!