ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

Public TV
1 Min Read
lokayukta raid 1

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಬೆಂಗಳೂರಿನ (Bengaluru) ಯಲಹಂಕದಲ್ಲಿರುವ ಬಿಬಿಎಂಪಿ (BBMP) ಎಡಿಟಿಪಿ ಗಂಗಾಧರಯ್ಯ (Gangadharaiah) ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

lokayukta raid

ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಬ್ಬರು ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ

ಗಂಗಾಧರಯ್ಯ ಅವರು ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಟ, ನಿರ್ದೇಶಕ ಟಪೋರಿ ಸತ್ಯ ನಿಧನ

Share This Article