ಬೆಂಗಳೂರು: ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ (Lokayukta) ಮರುಜೀವ ಬಂದ ಬಳಿಕ ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ದಾಳಿಯನ್ನು ಲೋಕಾಯುಕ್ತ ಅಧಿಕಾರಿಗಳು ಕೈಗೊಂಡಿದ್ದಾರೆ. ಮೊದಲ ದಾಳಿಯಲ್ಲೇ ಬಿಡಿಎ (BDA) ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು, ಬಿಸಿ ಮುಟ್ಟಿಸಿದ್ದಾರೆ. ಬಿಡಿಎನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಅವ್ಯವಹಾರಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ (Raid) ನಡೆಸಿ ತನಿಖೆ ಕೈಗೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 3:30ರ ಸುಮಾರಿಗೆ ಲೋಕಾಯುಕ್ತ ಅಧಿಕಾರಿಗಳು ಕುಮಾರ ಪಾರ್ಕ್ ಬಳಿಯ ಬಿಡಿಎ ಕೇಂದ್ರ ಕಚೇರಿಗೆ ಲಗ್ಗೆ ಇಟ್ಟಿದ್ದರು. ಸುಮಾರು 35 ಅಧಿಕಾರಿಗಳ 6 ತಂಡಗಳು ದಾಳಿ ನಡೆಸಿ ಟೌನ್ ಪ್ಲಾನಿಂಗ್, ಅಲಾಟ್ಮೆಂಟ್ ಸೆಕ್ಷನ್ ಮತ್ತು ಪರಿಹಾರ ವಿತರಣೆ ಸೆಕ್ಷನ್‌ಗಳಲ್ಲಿ ಕಂಡು ಬಂದ ಅಕ್ರಮ ಅವ್ಯವಹಾರಗಳ ಬಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ಬಿಡಿಎ ಮೇಲೆ ದಾಳಿ ನಡೆಯುತ್ತಿದ್ದಂತೆ ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಬಿಡಿಎ ಕಚೇರಿಗೆ ದೌಡಾಯಿಸಿ ದಾಳಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್, ಎಸ್‌ಪಿ ಅಶೋಕ್ ಕೆವಿ ನೇತೃತ್ವದಲ್ಲಿ 3 ಸೆಕ್ಷನ್‌ಗಳ ದಾಖಲೆ ಮತ್ತು ಕಡತಗಳನ್ನು ಕೂಲಂಕುಷವಾಗಿ ಕ್ರಾಸ್ ಚೆಕ್ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಲೋಕಾಯುಕ್ತ ನ್ಯಾ. ಬಿಎಸ್ ಪಾಟೀಲ್ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ಈಗಾಗಲೇ ದಾಖಲೆಗಳ ಪರಿಶೀಲನೆ ನಡೆಸಿ, ನಂತರ ಮಾಹಿತಿ ನೀಡಲಾಗುವುದು ಎಂದಿದ್ದಾರೆ.
Advertisement
Advertisement
ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸಾರ್ವಜನಿಕರಿಂದ ದೂರುಗಳ ಮಹಾಪೂರವೇ ಹರಿದು ಬಂದಿದೆ. ಬಿಡಿಎ ಆವರಣದಲ್ಲಿದ್ದ ನೂರಾರು ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದು ಭೇಟಿಯಾಗಿ ತಮ್ಮ ಸಂಕಷ್ಟಗಳ ಬಗ್ಗೆ ವಿವರಣೆ ನೀಡಿದರು. ಸಾರ್ವಜನಿಕರ ದೂರುಗಳು ಹೆಚ್ಚಾಗುತ್ತಿದ್ದಂತೆ, ಅಹವಾಲು ಆಲಿಸಲು ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಿದರು. ಸಾರ್ವಜನಿಕರ ಬಳಿ ಆಗಮಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಮತ್ತು ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಜನರ ಅಹವಾಲು ಪಡೆದರು. ಇದನ್ನೂ ಓದಿ: ಈದ್ಗಾ ಮೈದಾನದ ಎದುರು ಹಾರಾಡಿತು ಭಗವಾಧ್ವಜ – ಹಳಿಯಾಳದಲ್ಲಿ 144 ಸೆಕ್ಷನ್ ಜಾರಿ
ಲೋಕಾಯುಕ್ತ ದಾಳಿ ವೇಳೆ ಬಿಡಿಎ ಆವರಣದಲ್ಲಿ ಕೆಲವು ಬ್ರೋಕರ್‌ಗಳ ಓಡಾಟ ಕೂಡ ಕಂಡು ಬಂದಿದೆ. ಕೂಡಲೇ ಲೋಕಾಯುಕ್ತ ಅಧಿಕಾರಿಗಳು ಬ್ರೋಕರ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅನಿಲ್ ಕುಮಾರ್, ಆದಿನಾರಾಯಣ, ಹಾಗೂ ಮಂಜಪ್ಪನನ್ನು ವಶಕ್ಕೆ ಪಡೆದುಕೊಂಡು ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಇದಲ್ಲದೆ 2022 ರಲ್ಲಿ ಎಸಿಬಿ ಅಧಿಕಾರಿಗಳು ಕೂಡ ಬಿಡಿಎ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದರ ತನಿಖೆ ಸಹ ಲೋಕಾಯುಕ್ತದಲ್ಲಿ ತನಿಖೆ ಹಂತದಲ್ಲಿ ಇರುವಾಗಲೇ ಈಗ ಮತ್ತೆ ಲೋಕಾಯುಕ್ತರು ದಾಳಿ ನಡೆಸಿ ಬಿಗ್ ಶಾಕ್ ಕೊಟ್ಟಿದ್ದಾರೆ.
ರಾತ್ರಿ 9 ಗಂಟೆಯ ವೇಳೆ ಭೂ ಸ್ವಾಧೀನ ವಿಭಾಗದಲ್ಲಿ ನಡೆಸಿದ ದಾಳಿ ಅಂತ್ಯಗೊಂಡಿದ್ದು, ಇನ್ನು 3 ವಿಭಾಗದಲ್ಲಿ ದಾಖಲಾತಿ ಪರಿಶೀಲನೆ ಮುಂದುವರಿದಿದೆ. ಅಧಿಕಾರಿಗಳು ಯಾವುದೇ ಫೈಲ್ ತೆಗದುಕೊಂಡು ಹೊಗದೇ ಸಿಡಿ ಮುಖಾಂತರ ಡಾಟಾವನ್ನು ಸಂಗ್ರಹಿಸಿ ಅದನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಿಂದೆ ಎಸಿಬಿ ದಾಳಿಯಲ್ಲಿ ಅಧಿಕಾರಿಗಳು ಫೈಲ್ ತೆಗೆದುಕೊಂಡು ಹೋಗಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಸಾರ್ವಜನಿಕರು ಮಾಹಿತಿ ಕೇಳಿದಾಗ ಬಿಡಿಎ ಅಧಿಕಾರಿಗಳು ಅದನ್ನು ಎಸಿಬಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎನ್ನುತ್ತಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಡಾಟಾಗಳನ್ನು ಸಿಡಿಯಲ್ಲಿ ಸಂಗ್ರಹಿಸಿ ತೆಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ದಾವೂದಿ ಬೋಹ್ರಾ ಸಮುದಾಯದ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ ಮೋದಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k